ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಅಡ್ರೆಸ್‌ಗೆ ಇರುವುದಿಲ್ಲ: ಯಡಿಯೂರಪ್ಪ

ಸಾರಾಂಶ

ಈ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನೀವು ಅಡ್ರೆಸ್‌ಗೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

 ಮೈಸೂರು:  ಈ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನೀವು ಅಡ್ರೆಸ್‌ಗೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಬಿಜೆಪಿ-ಜೆಡಿಎಸ್‌ನ ಬೃಹತ್‌ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರವನ್ನೂ ನಾವು ಗೆಲ್ಲಬೇಕು ಎಂಬ ಉದ್ದೇಶವಿದೆ. 

ಹಾಲು ಜೇನಿನಂತೆ ಬಿಜೆಪಿ-ಜೆಡಿಎಸ್‌ ಒಟ್ಟಾಗಿ ಕೆಲಸ ಮಾಡಲಿವೆ. ಜೆಡಿಎಸ್‌-ಬಿಜೆಪಿ ಮೈತ್ರಿಯನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಹಣ, ಅಧಿಕಾರ, ಹೆಂಡದ ಬಲದಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್‌ನವರು ಉದ್ದೇಶಿಸಿದ್ದಾರೆ. ಆದರೆ, ಫಲಿತಾಂಶದ ಬಳಿಕ ನೀವು ಅಡ್ರೆಸ್‌ಗೆ ಇರುವುದಿಲ್ಲ ಎಂದು ಭವಿಷ್ಯ ನುಡಿದರು.

Share this article