ಮನವೊಲಿಸಿ, ಒಪ್ಪದಿದ್ದರೆ ಕೈಬಿಡಿ: ಡಿಕೆಶಿಗೆ ರಾಹುಲ್

Published : Jun 06, 2026, 09:37 AM IST
DK Shivakumar Cabinet portfolio row

ಸಾರಾಂಶ

ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿರುವ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಿ. ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ಅವರು ನೀಡಿರುವ ರಾಜೀನಾಮೆ ಅಂಗೀಕರಿಸಿ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದೆ.

 ಬೆಂಗಳೂರು :  ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿರುವ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಿ. ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ಅವರು ನೀಡಿರುವ ರಾಜೀನಾಮೆ ಅಂಗೀಕರಿಸಿ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದೆ.

ರಾಹುಲ್‌ ಗಾಂಧಿ ಅವರಿಗೆ ವಿವರಣೆ

ರಾಮಲಿಂಗಾರೆಡ್ಡಿ ರಾಜೀನಾಮೆ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ರಾಹುಲ್‌ ಗಾಂಧಿ ಅವರಿಗೆ ವಿವರಣೆ ನೀಡಿದರು ಎನ್ನಲಾಗಿದೆ.

ಈ ಬಗ್ಗೆ ರಾಹುಲ್‌ ಗಾಂಧಿ ಅವರು ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಮನವೊಲಿಕೆ ಮಾಡಲು ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರಿಗೆ ಸೂಚನೆ

ಈ ವೇಳೆ ರಾಹುಲ್​​ ಗಾಂಧಿ ಅವರು, ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಕೆ ಮಾಡಲು ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದರು. ಒಂದೊಮ್ಮೆ ರಾಜೀನಾಮೆ ಹಿಂಪಡೆಯದಿದ್ದರೆ ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ. ಇಂತಹ ಬೆದರಿಕೆಗಳಿಗೆ ಒಮ್ಮೆ ಮಣಿದರೆ ಉಳಿದವರು ಸಹ ಇದೇ ಮಾರ್ಗ ಅನುಸರಿಸಬಹುದು ಎಂದು ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ರಾಮಲಿಂಗಾರೆಡ್ಡಿ ರಾಜೀನಾಮೆ, ರಾಜ್ಯ ಕಾಂಗ್ರೆಸ್ಸಲ್ಲಿ ಹೈಡ್ರಾಮಾ
ಋತಬ್ರತಗೆ ಮಾನ್ಯತೆ ಪ್ರಶ್ನಿಸಿ ಟಿಎಂಸಿ ಹೈಕೋರ್ಟ್‌ಗೆ