;Resize=(412,232))
ಮೈಸೂರು : ಇನ್ನೆರಡು ದಿನಗಳಲ್ಲಿ ರಾಜ್ಯದ ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಇದರಲ್ಲಿ ಕೆಲವು ಶಾಸಕರಿಗೂ ಸ್ಥಾನಮಾನ ಕೊಡಬೇಕಿದೆ, ಖಂಡಿತವಾಗಿಯೂ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ನಿಗಮ-ಮಂಡಳಿಗಳ ನೇಮಕಾತಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೀಪಾವಳಿ ಉಡುಗೊರೆಯಾಗಿ ಸುಮಾರು 500 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ವಿವಿಧ ನಿಗಮ-ಮಂಡಳಿ ಮತ್ತು ಪ್ರಾಧಿಕಾರಗಳಲ್ಲಿ ವಿವಿಧ ಅಧಿಕಾರ ಹಂಚಿಕೆ ಮಾಡಲಾಗುವುದು. ಒಟ್ಟು ಮೂರು ಹಂತದಲ್ಲಿ ಅಧಿಕಾರ ಹಂಚಿಕೆ ಮಾಡುತ್ತೇವೆ ಎಂದರು.
ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ 400ಕ್ಕೂ ಹೆಚ್ಚು ಮಂದಿ ನಿರ್ದೇಶಕರು ಹಾಗೂ ಸದಸ್ಯರ ನೇಮಕಾತಿ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಉಳಿದಂತೆ, ಎರಡು ಹಂತಗಳ ಪಟ್ಟಿಯಲ್ಲಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಾತಿಯನ್ನು ಇನ್ನೆರಡು ದಿನಗಳಲ್ಲಿ ಅಂತಿಮಗೊಳಿಸಿ ಬಿಡುಗಡೆ ಮಾಡಲಾಗುವುದು. ಎಲ್ಲವೂ ಅಂತಿಮ ಹಂತದಲ್ಲಿದೆ. ಕೆಲವು ಶಾಸಕರಿಗೂ ಸ್ಥಾನಮಾನ ಕೊಡಬೇಕಿದೆ, ಖಂಡಿತವಾಗಿಯೂ ಕೊಡುತ್ತೇವೆ ಎಂದು ಹೇಳಿದರು.