;Resize=(412,232))
ಬೆಂಗಳೂರು : ಪಕ್ಷದ ಕಾರ್ಯಕರ್ತರಿಗೆ ಅಧಿಕಾರ ನೀಡಲು ನಿಗಮ-ಮಂಡಳಿಗಳಿಗೆ ಮೊದಲ ನೇಮಕಾತಿ ಪಟ್ಟಿ ಪ್ರಕಟಿಸಿದ್ದು, ಒಂದೆರಡು ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಬಾಕಿ ಇರುವ ಸ್ಥಾನಗಳನ್ನು ಕಾರ್ಯಕರ್ತರಿಗೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಮುಂದಿನ ಪಟ್ಟಿಯಲ್ಲಿ ನಿಗಮ-ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ನೇಮಕದ ಸುಳಿವು ನೀಡಿದ್ದಾರೆ.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾರತ ಜೋಡೋ ಯುವ ಸಂಘಕ್ಕೆ ಸದಸ್ಯತ್ವ ಮಾಡಿಸಿ. ಮುಂದಿನ ದಿನಗಳಲ್ಲಿ ಪಂಚಾಯಿತಿ ಹಾಗೂ ವಾರ್ಡ್ ಮಟ್ಟಗಳಲ್ಲಿ ಭಾರತ ಜೋಡೋ ಸಂಘಗಳಿಗೆ ಸದಸ್ಯರನ್ನು ಸೇರಿಸಬೇಕು’ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
‘ಗ್ಯಾರಂಟಿ ಸಮಿತಿಗೆ 40 ಸಾವಿರ ಜನರನ್ನು ನೇಮಿಸಿದ್ದು, 20 ಸಾವಿರ ಸದಸ್ಯರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಸರ್ಕಾರದ ಐದು ಗ್ಯಾರಂಟಿಗಳು ಪ್ರಮುಖವಾಗಿದ್ದು, ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ. ಇಡೀ ದೇಶ ನಮ್ಮ ಗ್ಯಾರಂಟಿ ಯೋಜನೆಗಳನ್ನು ಗಮನಿಸುತ್ತಿದೆ. ಹೀಗಾಗಿ ಇವುಗಳನ್ನು ಜನರಿಗೆ ತಲುಪಿಸಬೇಕುॐ ಎಂದು ಹೇಳಿದರು.
ಎಸ್ಐಆರ್ ವಿಚಾರವಾಗಿ ಪಕ್ಷದಿಂದ ಒಂದು ಆ್ಯಪ್ ಸಿದ್ಧಪಡಿಸಿದ್ದು, ಮತಪಟ್ಟಿಯಿಂದ ಕೈಬಿಡಲಾಗಿರುವ ಅರ್ಹ ಮತದಾರರ ಹೆಸರನ್ನು ಮತ್ತೆ ಸೇರಿಸಲು ನಾವು ಆಲೋಚನೆ ಮಾಡಬೇಕು. ಅದಕ್ಕಾಗಿ ಕೆಲಸ ಮಾಡಬೇಕು. ನಾವು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಿದ್ದೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.