ಪರಿಷತ್‌ ಎಲೆಕ್ಷನ್‌: ಬಿಜೆಪಿಯ ಪ್ರಾಣೇಶ್‌ ಆಯ್ಕೆ ಅಸಿಂಧು

Published : Aug 01, 2026, 11:21 AM IST
Gayathri Shanthegowda

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ 2021ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಆಯ್ಕೆಯಾಗಿದ್ದನ್ನು ಅಸಿಂಧುಗೊಳಿಸಿರುವ ಹೈಕೋರ್ಟ್, ಕಾಂಗ್ರೆಸ್ ಪಕ್ಷದ ಗಾಯತ್ರಿ ಶಾಂತೇಗೌಡ ವಿಜೇತ ಅಭ್ಯರ್ಥಿ ಎಂದು ಘೋಷಿಸಿದೆ.

 ಬೆಂಗಳೂರು :  ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ 2021ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಆಯ್ಕೆಯಾಗಿದ್ದನ್ನು ಅಸಿಂಧುಗೊಳಿಸಿರುವ ಹೈಕೋರ್ಟ್, ಕಾಂಗ್ರೆಸ್ ಪಕ್ಷದ ಗಾಯತ್ರಿ ಶಾಂತೇಗೌಡ ವಿಜೇತ ಅಭ್ಯರ್ಥಿ ಎಂದು ಘೋಷಿಸಿದೆ.

ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ ಮತ್ತು ಕೊಪ್ಪ ಟೌನ್ ಪಂಚಾಯ್ತಿಗಳ 12 ನಾಮನಿರ್ದೇಶಿತ ಸದಸ್ಯರು ಚಲಾಯಿಸಿದ್ದ ಮತಗಳನ್ನು ಪರಿಗಣಸಿ ಎಂ.ಕೆ.ಪ್ರಾಣೇಶ್ ಅವರು ವಿಜೇತ ಅಭ್ಯರ್ಥಿ ಎಂದು ಘೋಷಿಸಿದ್ದ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಅಮಾನ್ಯಗೊಳಿಸಬೇಕು ಹಾಗೂ ತಮ್ಮನ್ನು ವಿಜೇತ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಕೋರಿ ಗಾಯತ್ರಿ ಶಾಂತೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಚಲಾವಣೆಯಾದ ನಾಮ ನಿರ್ದೇಶಿತ ಸದಸ್ಯರ ಮತಗಳನ್ನು ಕೈಬಿಟ್ಟು, ಉಳಿಕೆ ಮತಗಳನ್ನು ಮರು ಎಣಿಕೆ ಮಾಡಿದ ನಂತರ ಗಾಯತ್ರಿ ಅವರಿಗೆ 1,183 ಮತಗಳು ಹಾಗೂ ಪ್ರಾಣೇಶ್ ಅವರಿಗೆ 1,174 ಚಲಾವಣೆಯಾಗಿವೆ. ಅದನ್ನು ಪರಿಗಣಿಸಿರುವ ಹೈಕೋರ್ಟ್, ಗಾಯತ್ರಿ ಶಾಂತೇಗೌಡ ಅವರು ವಿಜೇತ ಅಭ್ಯರ್ಥಿ ಎಂದು‌ ಘೋಷಿಸಿ ಇದೀಗ‌ ಆದೇಶಿಸಿದೆ.‌ ಅಲ್ಲದೆ, ಈ ಆದೇಶದ ಪ್ರತಿಯನ್ನು ಪರಿಷತ್ ಸಭಾಪತಿ ಅವರಿಗೆ ಕಳುಹಿಸಿಕೊಡುವಂತೆ ರಿಜಿಸ್ಟ್ರಾರ್‌ಗೆ ನಿರ್ದೇಶಿಸಿದೆ.‌‌

ಇದರಿಂದ ಗಾಯತ್ರಿ ಶಾಂತೇಗೌಡ ಅವರು ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ವಿಧಾನಪರಿಷತ್‌ ಸದಸ್ಯರಾಗಲಿದ್ದಾರೆ.‌‌ ಅವರ ಅಧಿಕಾರಾವಧಿ ಸುಮಾರು ಒಂದೂವರೆ ವರ್ಷ ಇರಲಿದೆ.

ಪ್ರಕರಣವೇನು?:

ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ 2021ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಎಂ.ಕೆ.ಪ್ರಾಣೇಶ್ 1,182 ಮತಗಳನ್ನು ಮತ್ತು ಗಾಯಿತ್ರಿ ಅವರು 1,176 ಮತ ಪಡೆದಿದ್ದರು. ಎಂ.ಕೆ.ಪ್ರಾಣೇಶ್ 6 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮತ್ತೊಂದು ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಸಿದ್ದ ಗಾಯತ್ರಿ ಶಾಂತೇಗೌಡ ಅವರು, ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ ಮತ್ತು ಕೊಪ್ಪ ಟೌನ್ ಪಂಚಾಯ್ತಿಗಳ 12 ನಾಮನಿರ್ದೇಶಿತ ಸದಸ್ಯರಿಗೆ ಕಾನೂನು ಬಾಹಿರವಾಗಿ ಮತದಾನದ ಹಕ್ಕು ನೀಡಿರುವುದರಿಂದ ಪ್ರಾಣೇಶ್ ಗೆಲುವು ಸಾಧಿಸಿದ್ದಾರೆ. ಆದರೆ ಮೂಲತಃ ಸಂವಿಧಾನದ ನಿಯಮಗಳಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಎಂಎಲ್‌ಸಿ ಚುನಾವಣೆಯಲ್ಲಿ ಮತದಾನದ ಹಕ್ಕಿಲ್ಲ. ಅವರ ಆಯ್ಕೆ ಅಕ್ರಮ ಹಾಗೂ ಕಾನೂನುಬಾಹಿರ. ಹಾಗೆಯೇ, ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ನ್ಯಾಯಾಲಯವನ್ನು ಕೋರಿದ್ದರು.

ಈ ಮನವಿ ಪುರಸ್ಕರಿಸಿದ್ದ ಹೈಕೋರ್ಟ್ ಮತ್ತೊಂದು ಏಕಸದಸ್ಯ ನ್ಯಾಯಪೀಠ, ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು 2022ರ ಮಾ.11ರಂದು‌ ತೀರ್ಪು ನೀಡಿತ್ತು.

ಈ ತೀರ್ಪು ಪ್ರಶ್ನಿಸಿ ಎಂ.ಕೆ.‌ಪ್ರಾಣೇಶ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

ಈ ತೀರ್ಪು ಪ್ರಶ್ನಿಸಿ ಎಂ.ಕೆ.‌ಪ್ರಾಣೇಶ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಸಹ ಹೈಕೋರ್ಟ್ ತೀರ್ಪು ಎತ್ತಿಹಿಡಿದಿತ್ತು. ನಂತರ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಸೂಚನೆಯಂತೆ ಚುನಾವಣೆಯಲ್ಲಿ ಚಲಾವಣೆಯಾದ ನಾಮ ನಿರ್ದೇಶಿತ ಸದಸ್ಯರ ಮತಗಳನ್ನು ಕೈಬಿಟ್ಟು, ಉಳಿಕೆ ಮತಗಳನ್ನು ಮರು ಎಣಿಕೆ ಮಾಡಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸಿದ್ದರು.

ಲಕೋಟೆಯಲ್ಲಿ ಸಲ್ಲಿಸಿದ ಮಾಹಿತಿಯಂತೆ ಗಾಯತ್ರಿ ಅವರಿಗೆ 1,183 ಮತಗಳು ಹಾಗೂ ಪ್ರಾಣೇಶ್ ಅವರಿಗೆ 1,174 ಮತ ಚಲಾವಣೆಯಾಗಿದ್ದವು. ಅದನ್ನು ಪರಿಗಣಿಸಿರುವ ಹೈಕೋರ್ಟ್ ಇದೀಗ ಗಾಯತ್ರಿ ಶಾಂತೇಗೌಡ ಅವರು ವಿಜೇತ ಅಭ್ಯರ್ಥಿ ಎಂದು‌ ಘೋಷಿಸಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ನಾಡಿದ್ದು ಸಂಪುಟ ವಿಸ್ತರಣೆ 99% ಗ್ಯಾರಂಟಿ : ಡಿಕೆಶಿ
ರಾಜ್ಯದ ಕಾವೇರಿ ಹಿತರಕ್ಷಣೆಗೆ ಬದ್ಧ: ಡಿಕೆಶಿ