ಯುವಕರಲ್ಲಿ ಸಂಸ್ಕೃತಿಕ ದಿವಾಳಿತನ ಹೆಚ್ಚುತ್ತಿದೆ

KannadaprabhaNewsNetwork |  
Published : Apr 21, 2024, 02:16 AM ISTUpdated : Apr 21, 2024, 06:38 AM IST
೨೦ಕೆಎಲ್‌ಆರ್-೨ಬೆಂಗಳೂರು ಉತ್ತರ ವಿವಿಯಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ೧೩೩ನೇ ಜಯಂತಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಹಾಗೂ ಜನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅವರಿಗೆ ವಿವಿಯಿಂದ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಡಾ.ಅಂಬೇಡ್ಕರ್ ಅವರನ್ನು ದೈವೀಕರಿಸುವ ಕೆಲಸ ಹೆಚ್ಚಾಗಿ ನಡೆಯುತ್ತಿದ್ದು, ಅವರ ತತ್ವಾದರ್ಶಗಳನ್ನು ಬೆಳೆಸಿಕೊಳ್ಳುವುದು ಕಡಿಮೆಯಿದೆ. ಅಂಬೇಡ್ಕರ್ ಪ್ರತಿಯೊಬ್ಬರಿಗೂ ಅರಿವಾಗಬೇಕೇ ಹೊರತು, ಅಮಲಾಗಬಾರದು.

  ಕೋಲಾರ : ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಮಾನವೀಯ ಗುಣಗಳು ಇಲ್ಲವಾಗಿದ್ದು, ಯುವಕರಲ್ಲಿ ಸಾಂಸ್ಕೃತಿಕ ದಿವಾಳಿತನ ಹೆಚ್ಚಾಗುತ್ತಿದೆ ಎಂದು ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್. ನಾಗಮೋಹನ್‌ದಾಸ್ ಕಳವಳ ವ್ಯಕ್ತಪಡಿಸಿದರು. ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಮಂಗಸಂದ್ರದ ಸ್ನಾತಕೋತ್ತರ ಕೇಂದ್ರದಲ್ಲಿ ಅಂಬೇಡ್ಕರ್‌ರ ೧೩೩ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಕರು ಬುದ್ಧಿವಂತರಾಗುತ್ತಿದ್ದಾರೆಯೇ ಹೊರತು ಮಾನವೀಯ ಗುಣಗಳು ಅವರಲ್ಲಿ ಕಾಣುತ್ತಿಲ್ಲ ಎಂದರು. ಮಹಿಳಾ ಹಕ್ಕುಗಳ ಪ್ರತಿಪಾದಕ

ಅಂಬೇಡ್ಕರ್ ಕಾನೂನು ಸಚಿವರಾಗಿದ್ದಂತಹ ಸಂದರ್ಭದಲ್ಲಿ ಅಂಬೇಡ್ಕರ್ ಅವರು ಮಹಿಳೆಯರ ರಕ್ಷಣೆಗಾಗಿ ಹಿಂದೂ ಕೋಡ್ ಬಿಲ್ ತಂದರು. ಅದನ್ನು ಅವರದೇ ಪಕ್ಷದವರು ಅಂಗೀಕರಿಸದ ಹಿನ್ನೆಲೆಯಲ್ಲಿ ತಮ್ಮ ಕಾನೂನ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಆದರೆ ಈಗ ಅವೇಶನದಲ್ಲಿ ನೀಲಿ ಚಿತ್ರ ನೋಡಿ, ಅತ್ಯಾಚಾರ ಪ್ರಕರಣಗಳಿಂದಾಗಿ ರಾಜೀನಾಮೆ ನೀಡಿದ ಸಚಿವರಿದ್ದಾರೆಯೇ ಹೊರತು, ಮಹಿಳೆಯರ ಹಕ್ಕುಗಳಿಗಾಗಿ ರಾಜೀನಾಮೆ ನೀಡಿದ ಏಕೈಕ ವ್ಯಕ್ತಿ ಎಂದರೆ ಅದು ಅಂಬೇಡ್ಕರ್ ಮಾತ್ರ ಎಂದರು. ಸಂವಿಧಾನಕ್ಕೆ ಪರ್ಯಾಯವೇನು?ಕೆಲವು ಅಜ್ಞಾನಿಗಳು ಸಂವಿಧಾನದಲ್ಲಿರುವ ಅಂಶಗಳು ಸರಿಯಿಲ್ಲ, ದೋಷದಿಂದ ಕೂಡಿದೆ ಎಂದು ಹೇಳಿಕೆಗಳನ್ನು ನೀಡುತ್ತಾರೆ. ಸರಿ ಆಯ್ತು , ಸಂವಿಧಾನ ಸರಿಯಿಲ್ಲ. ಸಂವಿಧಾನಕ್ಕೆ ಪರ್ಯಾಯವೇನು ಎನ್ನುವುದಕ್ಕೆ ಅವರ ಬಳಿ ಉತ್ತರವಿರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಪರ್ಯಾಯವಾಗಿ ಯಾವ ವ್ಯವಸ್ಥೆಯನ್ನು ನೀವು ತರುತ್ತೀರಿ ಎಂದು ಪ್ರಶ್ನಿಸಿದರು.

ಅಂಬೇಡ್ಕರ್ ಅವರನ್ನು ದೈವೀಕರಿಸುವ ಕೆಲಸ ಹೆಚ್ಚಾಗಿ ನಡೆಯುತ್ತಿದ್ದು, ಅವರ ತತ್ವಾದರ್ಶಗಳನ್ನು ಬೆಳೆಸಿಕೊಳ್ಳುವುದು ಕಡಿಮೆಯಿದೆ. ಅಂಬೇಡ್ಕರ್ ಪ್ರತಿಯೊಬ್ಬರಿಗೂ ಅರಿವಾಗಬೇಕೇ ಹೊರತು, ಅಮಲಾಗಬಾರದು. ಯುವಕರು ಬುದ್ಧಿವಂತರಾಗಿದ್ದರೂ ಪರವಾಗಿಲ್ಲ. ಆದರೆ, ಅವರಲ್ಲಿ ಮಾನವೀಯ ಗುಣಗಳನ್ನು ಬೆಳೆಸುವಂತಹ ಕೆಲಸವನ್ನು ವಿಶ್ವವಿದ್ಯಾಲಯಗಳು ಮಾಡಬೇಕಿವೆ ಎಂದು ಬೆಂಗಲೂರು ಉತ್ತರ ವಿವಿ ಕುಲಪತಿ ಪ್ರೊ.ನಿರಂಜನ ವಾನಳ್ಳಿಹೇಳಿದರು.ಅಮ್ಮನ ಕಣ್ಣಿನಿಂದ ಅಂಬೇಡ್ಕರ್ ನೋಡಿ

ಬಹುತ್ವ ಭಾರತದ ಭವಿಷ್ಯ ಎಂದರೆ ಅದು ಸಂವಿಧಾನ ಮಾತ್ರ. ಅಂಬೇಡ್ಕರ್ ಅವರನ್ನು ಅಮ್ಮನ ಕಣ್ಣಿನಿಂದ ನೋಡಿದಾಗ ಮಾತ್ರವೇ ಸಂವಿಧಾನದ ಮಹತ್ವ ನಮಗೆ ತಿಳಿಯುತ್ತದೆ. ಜಾತಿ, ಧರ್ಮ, ವರ್ಗ, ಭಾಷೆಯ ಕಣ್ಣಿನಿಂದ ನೋಡಿದರೆ ಅಂಬೇಡ್ಕರ್ ಅರ್ಥವಾಗುವುದಿಲ್ಲ ಎಂದು ಜನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹೇಳಿದರು. ಕಾರ್ಯಕ್ರಮದಲ್ಲಿ ಕುಲಸಚಿವ (ಮೌಲ್ಯಮಾಪನ) ಡಾ.ಕೆ.ತಿಪ್ಪೇಸ್ವಾಮಿ, ಹಣಕಾಸು ಅಕಾರಿ ಬಿ.ವಿ.ವಸಂತಕುಮಾರ್, ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ.ಡಿ.ಕುಮುದ, ಸಿಂಡಿಕೇಟ್ ಸದಸ್ಯ ವೆಂಕಟೇಶಪ್ಪ, ಕಾರ್ಯಕ್ರಮ ಸಂಯೋಜಕ ಡಾ.ಆರ್.ಮಂಜುನಾಥ್, ಉಪನ್ಯಾಸಕರಾದ ಡಾ.ಗುಂಡಪ್ಪ, ಡಾ.ಸತೀಶ್, ಶಿವರಾಜ್, ಡಾ.ರೂಪಾ, ಲೋಕೇಶ್, ಮಮತಾ, ಮೈತ್ರಿ, ಶ್ರೀಲತಾ, ಸುಷ್ಮಾ, ಡಾ.ಶಿಲ್ಪಾ ಸೇರಿದಂತೆ ಪ್ರಮುಖರಿದ್ದರು.

PREV

Recommended Stories

''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ಶೇ.40 ಕಮಿಷನ್‌ ಆರೋಪ : ನ್ಯಾ. ದಾಸ್‌ ವರದಿ ಪರಿಶೀಲನೆಗೆ ಮತ್ತೊಂದು ಸಮಿತಿ