ಡಿ.ಕೆ. ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

KannadaprabhaNewsNetwork | Updated : Feb 12 2024, 11:57 AM IST

ಸಾರಾಂಶ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಮ್ಮ ಸುದ್ದಿಗೆ ಬಂದವರಿಗೆ ಸೆಟಲ್‌ ಮೆಂಟ್ ಆಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗೆ ಭಾನುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಕೆ.ಎಸ್. ಈಶ್ವರಪ್ಪ, ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಇಬ್ಬರು ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. 

ನನ್ನ ಮಾತಿಗೆ ಸಿನಿಮಾ ಸ್ಟೈಲ್‌ ನಲ್ಲಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲಿ ಸೆಟಲ್‌ ಮೆಂಟ್ ಆಗಿದೆ. 

ಉಳಿದ ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್‌ ಮೆಂಟ್ ಆಗುತ್ತೆ, ನೋಡ್ತಾ ಇರಿ, ಇಷ್ಟರಲ್ಲೆ ಡಿ.ಕೆ. ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಅವರು ಹೇಳಿದರು.

ನಾಡಪ್ರಭು ಕೆಂಪೇಗೌಡ ಅವರು ಡಿ.ಕೆ. ಶಿವಕುಮಾರ್‌ ಅವರ ಆಸ್ತಿಯಲ್ಲ. ತಮ್ಮನ್ನು ರಾಜ್ಯ ಕಟ್ಟಿದ ವ್ಯಕ್ತಿಯ ಜೊತೆ ಹೋಲಿಕೆ ಮಾಡಿಕೊಳ್ಳುವುದು ಸರಿಯಲ್ಲ. 

ರಾಷ್ಟ್ರದ್ರೋಹ ಹೇಳಿಕೆಗೆ ಸಂಸದ ಡಿ.ಕೆ. ಸುರೇಶ್ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ. ಕ್ರಮಕೈಗೊಳ್ಳಿ ಎಂದರೆ ನನಗೆ ನೋಟಿಸ್ ಕಳುಹಿಸುತ್ತಾರೆ. ರಾಷ್ಟ್ರದ್ರೋಹಿಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ಅವರು ಕಿಡಿಕಾರಿದರು.

ಅಮಿತ್‌ ಶಾಗೆ ರಾಮ, ಲಕ್ಷ್ಮಣ, ಸೀತೆ, ಹನುಮಂತ ಸಮೇತ ವಿಗ್ರಹದ ನೆನಪಿನ ಕಾಣಿಕೆ
ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ನಗರ ಮತ್ತು ಬಿಜೆಪಿ ವತಿಯಿಂದ ಸೀತೆ, ಲಕ್ಷ್ಮಣ ಹನುಮಂತ ಸಮೇತ ರಾಮನ ವಿಗ್ರಹ ನೀಡಿ ಆತ್ಮೀಯವಾಗಿ ಅಭಿನಂದಿಸಿದರು.

ನಗರದ ರ್ಯಾಡಿಸನ್‌ ಬ್ಲ್ಯೂ ಹೊಟೇಲ್‌ ನಲ್ಲಿ ನಡೆದ ಬಿಜೆಪಿ ಕೋರ್‌ಕಮಿಟಿ ಸಭೆ ಮತ್ತು ಕ್ಲಸ್ಟರ್‌ಮಟ್ಟದ ಸಭೆಯ ವೇಳೆ ಅಮಿತ್‌ಶಾ ಅವರನ್ನು ಸನ್ಮಾನಿಸಲಾಯಿತು.

ಬಿಳಿ ರೇಷ್ಮೆಗೂಡಿನ ಹಾರ, ಫಲತಾಂಬೂಲದ ಜೊತೆಗೆ ರಾಮ, ಲಕ್ಷ್ಮಣ, ಸೀತೆ ಮತ್ತು ಆಂಜನೇಯನನ್ನು ಒಳಗೊಂಡ ವಿಗ್ರಹವನ್ನು ಒಳಗೊಂಡ ನೆನಪಿನ ಕಾಣಿಕೆ ನೀಡಲಾಯಿತು.

Share this article