ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರು: ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಬೈಂದೂರು ಮೂಲದ ರಾಜು ಪೂಜಾರಿ ಅವರು ಉಡುಪಿ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ಮೇರೆಗೆ ರಾಜು ಪೂಜಾರಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.