ಮೇಲ್ಮನೆ 6 ಕ್ಷೇತ್ರದ ಪೈಕಿ 2ರಲ್ಲಿ ದಳ ಜಯಭೇರಿ

ಸಾರಾಂಶ

ವಿಧಾನ ಪರಿಷತ್‌ನ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಮತ ಎಣಿಕೆ ಕಾರ್ಯದಲ್ಲಿ ಇಬ್ಬರು ದಳದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ವಿಧಾನ ಪರಿಷತ್‌ನ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಮತ ಎಣಿಕೆ ಕಾರ್ಯದಲ್ಲಿ  ಇಬ್ಬರು ದಳದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಜಯ ಗಳಿಸಿದ್ದಾರೆ. 

ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ತೆರಳಿ ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಮರಿತಿಬ್ಬೇಗೌಡ ಸೋಲನುಭವಿಸಿದ್ದಾರೆ. 

Share this article