ಪರಂ ನೇತೃತ್ವದಲ್ಲಿಂದು ದಲಿತರ ನಾಯಕರ ಸಭೆ

KannadaprabhaNewsNetwork |  
Published : Aug 01, 2025, 11:45 PM ISTUpdated : Aug 02, 2025, 05:08 AM IST
Dr G Parameshwar

ಸಾರಾಂಶ

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಕೇಳಿ ಬಂದ ಬೆನ್ನಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಶನಿವಾರ ದಲಿತ ಸಚಿವರು ಹಾಗೂ ಶಾಸಕರ ಸಭೆ ಏರ್ಪಡಿಸಿದ್ದಾರೆ.

  ಬೆಂಗಳೂರು :  ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಕೇಳಿ ಬಂದ ಬೆನ್ನಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಶನಿವಾರ ದಲಿತ ಸಚಿವರು ಹಾಗೂ ಶಾಸಕರ ಸಭೆ ಏರ್ಪಡಿಸಿದ್ದಾರೆ.

ಭೋಜನಕೂಟದ ಹೆಸರಿನಲ್ಲಿ ಶನಿವಾರ ಪರಮೇಶ್ವರ್ ಅವರ ನಿವಾಸದಲ್ಲಿ ಸಭೆ ಕರೆಯಲಾಗಿದ್ದು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಮುಂದಿನ ತೀರ್ಮಾನಗಳ ಕುರಿತು ಚರ್ಚಿಸಲು ಸಭೆ ಕರೆದಿರುವುದಾಗಿ ಮೂಲಗಳು ತಿಳಿಸಿವೆ.

ಈ ಹಿಂದೆ ದಲಿತ ಸಚಿವರು, ಶಾಸಕರ ಸಭೆ ಕರೆದಿದ್ದಾಗ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ಬ್ರೇಕ್‌ ಬಿದ್ದಿತ್ತು. ಇದೀಗ ಒಳ ಮೀಸಲಾತಿ ಕುರಿತು ಚರ್ಚಿಸುವ ಹೆಸರಿನಲ್ಲಿ ದಲಿತ ಎಡ ಹಾಗೂ ಬಲ ಎರಡೂ ಸಮುದಾಯದ ಶಾಸಕರು ಹಾಗೂ ಸಚಿವರಿಗೆ ಸಭೆಗೆ ಆಹ್ವಾನ ನೀಡಲಾಗಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಕ್ಕೂಟದ ಮೇಲೆ ಕೇಂದ್ರ ಪ್ರಹಾರ : ತ.ನಾಡು ಮುಖ್ಯಮಂತ್ರಿಗೆ ಸಿಎಂ ಪತ್ರ