ಪರಮೇಶ್ವರ್‌ರನ್ನು ಮಧ್ಯರಾತ್ರಿ ಭೇಟಿ ಮಾಡಿದ್ದು ನಿಜ : ಡಿ.ಕೆ.ಶಿವಕುಮಾರ್

Published : Jun 29, 2025, 10:47 AM IST
 DK Shivakumar

ಸಾರಾಂಶ

ಗೃಹ ಸಚಿವ ಪರಮೇಶ್ವರ್ ಅವರು ಮಧ್ಯರಾತ್ರಿ ವೇಳೆ ಬಂದು ನನ್ನನ್ನು ಭೇಟಿ ಮಾಡಿದ್ದು ನಿಜ. ಆದರೆ, ಅವರ ಜೊತೆ ಪವರ್ ಶೇರಿಂಗ್ ವಿಚಾರ ಕುರಿತು ಚರ್ಚೆ ನಡೆಸಿಲ್ಲ

ದಾಬಸ್‍ಪೇಟೆ:  ಗೃಹ ಸಚಿವ ಪರಮೇಶ್ವರ್ ಅವರು ಮಧ್ಯರಾತ್ರಿ ವೇಳೆ ಬಂದು ನನ್ನನ್ನು ಭೇಟಿ ಮಾಡಿದ್ದು ನಿಜ. ಆದರೆ, ಅವರ ಜೊತೆ ಪವರ್ ಶೇರಿಂಗ್ ವಿಚಾರ ಕುರಿತು ಚರ್ಚೆ ನಡೆಸಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಮೇಶ್ವರ್ ನಮ್ಮ ಸರ್ಕಾರದ ಮಂತ್ರಿಗಳು, ಅವರನ್ನು ಭೇಟಿ ಮಾಡಿದ್ದು ನಿಜ. ಆದರೆ, ಬೇರೆ ಬೇರೆ ವಿಚಾರಗಳ ಬಗ್ಗೆ ಚರ್ಚೆ ಮಾಡಿದೆವು. ಇಲ್ಲಿ ಪವರ್ ಶೇರಿಂಗ್ ವಿಚಾರ ಚರ್ಚೆ ಆಗಿಲ್ಲ. 

ಸರ್ಕಾರದಲ್ಲಿ ನಾವೆಲ್ಲರೂ ಸೇರಿ, ಒಟ್ಟಾಗಿ, ಶಿಸ್ತಿನಿಂದ ಕೆಲಸ ಮಾಡಬೇಕು. ಇದರ ಹೊರತಾಗಿ ಬೇರೆ ಯಾವುದೇ ವಿಚಾರ ಮಾತನಾಡಿಲ್ಲ ಎಂದು ಹೇಳಿದರು. ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯ ರಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ನಾವು ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೆಐಎಡಿಬಿ ವತಿಯಿಂದ ಶೇ.20ರಷ್ಟು ಅನುದಾನವನ್ನು ಸಣ್ಣ ಕೈಗಾರಿಕೆಗಳಿಗೆ ನೀಡಬೇಕು ಎಂಬ ಕಾನೂನಿದ್ದು, ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರ ಬಳಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇನೆ. ಸಣ್ಣ ಕೈಗಾರಿಕೆಗಳಿಗೆ ನಾವು ಒತ್ತು ನೀಡಬೇಕು ಎಂದು ಇದೇ ವೇಳೆ ಅವರು ತಿಳಿಸಿದರು.

PREV
Read more Articles on

Recommended Stories

ನನ್ನ ವಿರುದ್ಧ ಮೂವರ ಪಿತೂರಿ - ಬಿಜೆಪಿ ಸೇರೋ ಬಗ್ಗೆ ಏನಂದ್ರು ರಾಜಣ್ಣ
ಆ.17ರಿಂದ ಕಾಂಗ್ರೆಸ್‌ ‘ಮತದಾರ ಅಧಿಕಾರ ಯಾತ್ರೆ’