ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವು : ಕೇಂದ್ರಕ್ಕೆ ಸಂಸದ ಡಾ.ಸುಧಾಕರ್‌ ಪತ್ರ

KannadaprabhaNewsNetwork |  
Published : Jan 04, 2025, 12:30 AM ISTUpdated : Jan 04, 2025, 04:24 AM IST
ಸಿಕೆಬಿ-1 ಮತ್ತು 2 ಸಂಸದ ಡಾ.ಕೆ.ಸುಧಾಕರ್‌ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಬರೆದ ಪತ್ರಸಿಕೆಬಿ-3 ಸಂಸದ ಡಾ.ಕೆ.ಸುಧಾಕರ್‌ | Kannada Prabha

ಸಾರಾಂಶ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವಿಗೆ ನ್ಯಾಯ ಕೊಡಿಸಲು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಹಾಗೂ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ ಪರಿಶೀಲಿಸಬೇಕೆಂದು ಸಂಸದ ಡಾ.ಕೆ. ಸುಧಾಕರ್‌ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

 ಚಿಕ್ಕಬಳ್ಳಾಪುರ : ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವಿಗೆ ನ್ಯಾಯ ಕೊಡಿಸಲು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಹಾಗೂ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ ಪರಿಶೀಲಿಸಬೇಕೆಂದು ಸಂಸದ ಡಾ.ಕೆ. ಸುಧಾಕರ್‌ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕಳೆದ ಕೆಲವು ತಿಂಗಳಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮೃತಪಡುವ ಘಟನೆ ವರದಿಯಾಗುತ್ತಿವೆ. 2024 ರ ನವೆಂಬರ್‌ವರೆಗೆ 348 ತಾಯಂದಿರು ಮೃತಪಟ್ಟಿದ್ದಾರೆ. ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೇವಲ ನಾಲ್ಕು ತಿಂಗಳಲ್ಲಿ 217 ಪ್ರಕರಣ ವರದಿಯಾಗಿವೆ. ಈ 217 ಪ್ರಕರಣಗಳಲ್ಲಿ 179 ಪ್ರಕರಣಗಳು ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನಿರ್ವಹಣೆಯಲ್ಲಿ ಲೋಪ

ಹೆಚ್ಚಿನ ಪ್ರಕರಣಗಳು ಪಿಪಿಎಚ್‌ ಹಾಗೂ ಎಎಫ್‌ಇ, ಅನೀಮಿಯ ಹಾಗೂ ನಿರ್ವಹಣೆಯಲ್ಲಿ ಲೋಪಕ್ಕೆ ಸಂಬಂಧಿಸಿವೆ. ಆಂಟಿಬಯೋಟಿಕ್‌ ಕೊರತೆ, ತರಬೇತಿ ಹೊಂದಿರುವ ಸಿಬ್ಬಂದಿ ಕೊರತೆ ಮೊದಲಾದವು ಕೂಡ ಇದಕ್ಕೆ ಕಾರಣ. ಇದರಲ್ಲಿ ಲಿಂಜರ್ಸ್‌ ಲ್ಯಾಕ್ಟೇಟ್‌ ದ್ರಾವಣದಲ್ಲಿ ದೋಷ ಕೂಡ ಕಾರಣ ಎನ್ನಲಾಗುತ್ತಿದೆ. ಆದ್ದರಿಂದ ಈ ಕುರಿತು ಸಮಗ್ರವಾದ ಪರಿಶೀಲನೆ ನಡೆಯುವ ಅಗತ್ಯವಿದೆ. ಮೊದಲಿಗೆ, ತಾಯಂದಿರ ಮರಣಕ್ಕೆ ಕಾರಣಗಳನ್ನು ಪತ್ತೆ ಮಾಡಲು ತುರ್ತಾಗಿ ಕಾರ್ಯಯೋಜನೆ ರೂಪಿಸಬೇಕು. ಜೊತೆಗೆ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ, ಕಾರಣ ಪತ್ತೆ ಜೊತೆಗೆ, ಪರಿಹಾರವನ್ನು ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಗರ್ಭಿಣಿಯರ ಆರೈಕೆ ಹಾಗೂ ಹೆರಿಗೆ ಸಮಯದಲ್ಲಿ ಉತ್ತಮ ಸೇವೆ ನೀಡಲು ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕಿದೆ. ಕಬ್ಬಿಣಾಂಶದ ಆಹಾರ ಸೇವನೆ, ತುರ್ತು ಆರೈಕೆ, ಪ್ರತಿ ದಿನ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಗರ್ಭಿಣಿಯರಿಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ. ತಾಯಂದಿರ ಜೀವ ಕಾಪಾಡಿ

ದೇಶದ ಭವಿಷ್ಯದ ದೃಷ್ಟಿಯಿಂದ ನವಜಾತ ಶಿಶು ಹಾಗೂ ತಾಯಂದಿರ ಜೀವ ಕಾಪಾಡುವುದು ಬಹಳ ಅಗತ್ಯ. ಆದ್ದರಿಂದ ತಾವು ಈ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವ ಮೂಲಕ ಕರ್ನಾಟಕದಲ್ಲಿ ಹಾಗೂ ಭಾರತದ ಯಾವುದೇ ಭಾಗದಲ್ಲಿ ತಾಯಂದಿರು ಮೃತಪಡದಂತೆ ಎಚ್ಚರವಹಿಸಲು ಸಾಧ್ಯವಾಗುತ್ತದೆ. ಈ ಎಲ್ಲ ಕಾರ್ಯಗಳಿಗೆ ನಾನು ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡುತ್ತೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಕೇಂದ್ರದ ತೆರಿಗೆ ಪಾಲು ಏರಿಕೆಯಲ್ಲಿ ರಾಜ್ಯ ನಂ.1
ಸದನದಲ್ಲಿ ಇಂದು, ನಾಳೆ ಜಿ ರಾಮ್‌ ಜಿ ಸಂಗ್ರಾಮ