ಧಾರವಾಡ ಜಿಲ್ಲೆಯ ಜನರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಫಕೀರ ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಜನರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಫಕೀರ ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿ, ನಾನು ಮತ್ತೊಮ್ಮೆ ಶ್ರೀಗಳನ್ನು ಸಂಪರ್ಕಿಸಿ ಮನವೊಲಿಸುವ ಪ್ರಯತ್ನ ಮಾಡುವೆ. ನಿಮ್ಮ ಮೂಲಕವೂ ನಾನು ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದರು.
ಪ್ರಹ್ಲಾದ ಜೋಶಿ ಪ್ರಬುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಿವೆ. ರಾಜ್ಯಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅಲೆಯಿದ್ದು, ಈ ಬಾರಿಯೂ ಜೋಶಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.