ಬೆಂಗಳೂರು : ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಡಿ. 9 ಮತ್ತು 11ರಂದು ನಡೆಯಲಿದ್ದು, ಈ ದಿನಗಳಂದು ರಾಜ್ಯದ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕೇರಳ ಮತದಾರರಿಗೆ ವೇತನ ಸಹಿತ ರಜೆ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖಾಸಗಿ ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.
ಕೇರಳ ರಾಜ್ಯದ ನಿವಾಸಿಗಳು ರಾಜ್ಯದಲ್ಲಿ ಸಾಕಷ್ಟು ಮಂದಿಯಿದ್ದಾರೆ. ಅವರಲ್ಲಿ ಬಹುತೇಕರು ಖಾಸಗಿ ಸಂಸ್ಥೆ, ಹೋಟೆಲ್ ಸೇರಿದಂತೆ ಇನ್ನಿತರ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಬೇಕಿದ್ದು, ಅದಕ್ಕಾಗಿ ಕೇರಳ ಮತದಾರರಿಗೆ ಮತದಾನದ ದಿನದಂದು ವೇತನ ಸಹಿತ ರಜೆ ನೀಡಲು ಖಾಸಗಿ ಸಂಸ್ಥೆಗಳು ಮುಂದಾಗಬೇಕು ಎಂದು ಕೋರಿದ್ದಾರೆ.
ಈ ಹಿಂದೆ ಬಿಹಾರ ವಿಧಾನಸಭಾ ಚುನಾವಣೆ ವೇಳೆಯು ಡಿ.ಕೆ.ಶಿವಕುಮಾರ್ ಇದೇ ರೀತಿಯ ಮನವಿ ಮಾಡಿದ್ದರು.