ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ

KannadaprabhaNewsNetwork |  
Published : Aug 26, 2025, 01:04 AM ISTUpdated : Aug 26, 2025, 05:35 AM IST
ಬಿ.ಕೆ.ಹರಿಪ್ರಸಾದ್‌ | Kannada Prabha

ಸಾರಾಂಶ

ವಿಧಾನಸಭೆಯ ಕಲಾಪದಲ್ಲಿ ಆರ್‌ಎಸ್‌ಎಸ್‌ ಗೀತೆ ‘ನಮಸ್ತೆ ಸದಾ ವತ್ಸಲೆ...’ ಹಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

 ನವದೆಹಲಿ :  ವಿಧಾನಸಭೆಯ ಕಲಾಪದಲ್ಲಿ ಆರ್‌ಎಸ್‌ಎಸ್‌ ಗೀತೆ ‘ನಮಸ್ತೆ ಸದಾ ವತ್ಸಲೆ...’ ಹಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಯಾರಿಗೆ ಸಂದೇಶ ಕೊಡಲು ಅವರು ಆರ್‌ಎಸ್‌ಎಸ್‌ ಪ್ರಾರ್ಥನೆ ಮಾಡಿದ್ದಾರೋ ಗೊತ್ತಿಲ್ಲ. ಕೇವಲ ಉಪ ಮುಖ್ಯಮಂತ್ರಿಯಾಗಿ ಅವರು ಸಂಘದ ಪ್ರಾರ್ಥನೆ ಮಾಡೋದರಲ್ಲಿ ಅಭ್ಯಂತರ ಇಲ್ಲ.

ಆದರೆ, ಅವರು ಕೆಪಿಸಿಸಿ ಅಧ್ಯಕ್ಷರೂ ಕೂಡ ಹೌದು. ಕೆಪಿಸಿಸಿ ಅಧ್ಯಕ್ಷರಾಗಿ ಆರ್‌ಎಸ್‌ಎಸ್‌ ಪ್ರಾರ್ಥನೆ ಮಾಡಿದ್ದು ತಪ್ಪು. ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರಿಂದ ಆರ್‌ಎಸ್‌ಎಸ್‌ ಪ್ರಾರ್ಥನೆ ಮಾಡಿದ್ದಕ್ಕೆ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.

ಮಹಾತ್ಮ ಗಾಂಧಿಯನ್ನು ಕೊಂದವರು ಅವರು. ಆರ್‌ಎಸ್‌ಎಸ್‌ ದೇಶದಲ್ಲಿ ಈಗಾಗಲೇ ಮೂರು ಬಾರಿ ನಿಷೇಧಕ್ಕೆ ಒಳಗಾಗಿತ್ತು ಎಂದರು.

ಸಂಘದ ಪ್ರಾರ್ಥನೆಗೆ ಬಿಜೆಪಿಯವರ ಸಮರ್ಥನೆ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರು ಇಂತಹ ವಿಚಾರಗಳನ್ನು ಸಮರ್ಥನೆ ಮಾಡಿಕೊಳ್ಳಬೇಕು. ಹಾಗಾಗಿ, ಮಾಡಿಕೊಳ್ಳುತ್ತಾರೆ ಎಂದರು.

ಡಿಕೆಶಿ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿ, ಅವರು ಆ ಧೈರ್ಯ ಮಾಡಲ್ಲ ಅಂತಾ ಅಂದುಕೊಂಡಿದ್ದೇನೆ‌. ಆದರೆ, ಕೃಷಿಕರು, ವ್ಯಾಪಾರಸ್ಥರು, ಉದ್ಯೋಗಸ್ಥರು, ರಾಜಕಾರಣಿ... ಹೀಗೆ ಡಿಕೆಶಿಯವರಿಗೆ ಹಲವು ಮುಖಗಳಿವೆ ಎಂದು ಹೇಳಿದರು.

ಡಿಕೆಶಿ ಬಗ್ಗೆ ಹೈಕಮಾಂಡ್‌,ಸಿಎಂ ಚರ್ಚೆ ನಡೆಸಲಿ: ಸತೀಶ್‌ ಜಾರಕಿಹೊಳಿ

ಬಾಗಲಕೋಟೆ: ವಿಧಾನಸಭೆಯೊಳಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರ್‌ಎಸ್‌ಎಸ್‌ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಸತೀಶ್‌ ಜಾರಕಿಹೊಳಿ, ‘ಯಾಕೆ ಹಾಡಿದ್ದಾರೆಂದು ಅವರೇ ಉತ್ತರ ಕೊಡಬೇಕು. ಆದರೆ ಇದರ ಬಗ್ಗೆ ಪಕ್ಷದ ಹೈಕಮಾಂಡ್‌ ಮತ್ತು ಸಿಎಂ ಚರ್ಚೆ ನಡೆಸಬೇಕು. ರಾಜ್ಯದಲ್ಲಿ ಏನೇನು ನಡೆಯುತ್ತೆ ಅನ್ನೋ ಎಲ್ಲಾ ವಿಷಯ ರಾಹುಲ್‌ ಗಾಂಧಿ ಗಮನಕ್ಕೆ ಬರಲ್ಲ. ಹೀಗಾಗಿ ಈ ಎಲ್ಲಾ ವಿಷಯ ರಾಹುಲ್‌ಗೆ ಮುಟ್ಟಿಸೋ ಕೆಲಸ ಮಾಡಬೇಕು’ ಎಂದು ಹೇಳಿದ್ದಾರೆ

PREV
Read more Articles on

Recommended Stories

ಕೆರೆಗಳ ಬಫರ್ ವಲಯ ಕಡಿತ ವಿರೋಧಿಸಿ ರಾಜ್ಯಪಾಲರಿಗೆ ಮನವಿ
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌: ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌