ಯಾವ ಭ್ರಷ್ಟಾಚಾರ? ತಾಕತ್ತಿದ್ರೆ ಬಿ.ವೈ.ವಿಜಯೇಂದ್ರ ಹೇಳಲಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು

KannadaprabhaNewsNetwork |  
Published : Aug 03, 2024, 01:30 AM ISTUpdated : Aug 03, 2024, 04:51 AM IST
2ಕೆಆರ್ ಎಂಎನ್ 1.ಜೆಪಿಜಿಬಿಡದಿ ಪಟ್ಟಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹಾಗೂ ಬಿಜಿಪಿಯ 21 ಭ್ರಷ್ಟ ಹಗರಣಗಳ ವಿರುದ್ಧ ಜನಾಂದೋಲನ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು. | Kannada Prabha

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ತಾಕತ್‌ ಇದ್ದರೆ ಭ್ರಷ್ಟಾಚಾರದ ಪಿತಾಮಹ ಅಂದರೆ ಏನು? ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಲಿ. ಆಗ ಅವರನ್ನು ಬಿಜೆಪಿ ಅಧ್ಯಕ್ಷ ಎಂದು ಒಪ್ಪಿಕೊಳ್ಳುತ್ತೇನೆ  ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

 ರಾಮನಗರ :  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ತಾಕತ್‌ ಇದ್ದರೆ ಭ್ರಷ್ಟಾಚಾರದ ಪಿತಾಮಹ ಅಂದರೆ ಏನು? ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಲಿ. ಆಗ ಅವರನ್ನು ಬಿಜೆಪಿ ಅಧ್ಯಕ್ಷ ಎಂದು ಒಪ್ಪಿಕೊಳ್ಳುತ್ತೇನೆ ಮತ್ತು ಅವರಿಗೆ ಗೌರವ ಕೊಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ಬಿಡದಿ ಪಟ್ಟಣದಲ್ಲಿ ಕೆಪಿಸಿಸಿಯಿಂದ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹಾಗೂ ಬಿಜೆಪಿಯ 21 ಹಗರಣಗಳ ವಿರುದ್ಧ ಜನಾಂದೋಲನ ಸಮಾವೇಶದಲ್ಲಿ ಹಾಗೂ ನಂತರ ಸುದ್ದಿಗಾರರ ಜತೆಗೆ ಮಾತನಾಡಿ, ‘ಡಿ.ಕೆ.ಶಿವಕುಮಾರ್‌ ಭ್ರಷ್ಚಾಚಾರದ ಪಿತಾಮಹ’ ಎಂಬ ಹೇಳಿಕೆಗೆ ಸಂಬಂಧಿಸಿ ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ಹರಿಹಾಯ್ದರು. ಜತೆಗೆ ವಿಜಯೇಂದ್ರ ವಿರುದ್ಧದ ಎಲ್ಲಾ ಆರೋಪಗಳನ್ನು ಬಿಚ್ಚಿಡುತ್ತೇನೆಂದು ಗುಡುಗಿದರು.

ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ, ಯಾವಾಗ ಆಗಿದೆ ಅಂತ ವಿಜಯೇಂದ್ರ ಹೇಳಬೇಕು. ನಾನು ಇ.ಡಿ. ಕೇಸ್‌ನಲ್ಲಿ ಜೈಲಿಗೆ ಹೋಗಿದ್ದೆ‌. ಆಗ ನಿಮ್ಮಪ್ಪ(ಯಡಿಯೂರಪ್ಪ) ನನ್ನ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು. ಸುಪ್ರೀಂ ಕೋರ್ಟ್ ನಲ್ಲಿ ಇ.ಡಿ. ಕೇಸ್ ವಜಾ ಆಗಿದ್ದು ಗೊತ್ತಾ? ಇದಕ್ಕೆಲ್ಲ ಉತ್ತರ ಕೊಡುತ್ತೇನೆ ಸಮಯ ಬರಲಿ ಎಂದು ಹೇಳಿದರು.

ಬಿಜೆಪಿ ಸರ್ಕಾರದಲ್ಲಿ ಮಾಡಿದ ಹಗರಣಕ್ಕೆ ಜವಾಬ್ದಾರಿ ಯಾರು? ಯಾವ ಬ್ಯಾಂಕ್‌ಗೆಲ್ಲ ಹಣ ಹೋಗಿದೆ ಎಂಬ ಬಗ್ಗೆ ಮಾಹಿತಿ ಕೊಡಬೇಕು. ನಾವು ಎತ್ತಿರುವ ಪ್ರಶ್ನೆಗಳಿಗೆ ಸಂಬಂಧಿಸಿ ಪಾದಯಾತ್ರೆಯಲ್ಲಿ ಉತ್ತರ ಕೊಡಬೇಕು. ನನ್ನನ್ನು ಜೈಲಿಗೆ ಹಾಕಿಸುವ ಸಂಚು ನಡೆಯುತ್ತಿದೆ. ನಾನು ಜೈಲಿಗೆ ಹೋಗಲು ಸಿದ್ಧನಿದ್ದೇನೆ. ನನ್ನಂತಹ ಬೇಕಾದಷ್ಟು ಜನ ಕಾಂಗ್ರೆಸ್​​ನಲ್ಲಿ ಹುಟ್ಟಿಕೊಳ್ಳುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ ತಿಳಿಸಿದರು.

ತಾಕತ್ತಿದ್ರೆ ಕುಮ್ಮಕ್ಕು ಕೊಟ್ಟವನ ಹೆಸರೇಳಲಿ:

ವಿಜಯೇಂದ್ರ ನನ್ನ ಮೇಲೆ ಆರೋಪ ಮಾಡುತ್ತಾ ಪಾದಯಾತ್ರೆಗೆ ಕಾಂಗ್ರೆಸ್ಸಿಗರ ಕುಮ್ಮಕ್ಕೂ ಇದೆ ಎಂದು ಹೇಳಿದ್ದಾರೆ. ವಿಜಯೇಂದ್ರಗೆ ತಾಕತ್ತಿದ್ದರೆ, ಧೈರ್ಯವಿದ್ದರೆ ಕಾಂಗ್ರೆಸ್ ಪಕ್ಷದ ಯಾರು ಪಾದಯಾತ್ರೆಗೆ ಕುಮ್ಮಕ್ಕು ನೀಡಿದ್ದಾರೋ ಅವರ ಹೆಸರು ಹೇಳಲಿ ಎಂದು ಸವಾಲು ಹಾಕಿದ ಅವರು, ನಿಮ್ಮ ತಂದೆಗೆ ಕಾಂಗ್ರೆಸ್‌ ಸರ್ಕಾರ ಭಿಕ್ಷೆ ಕೊಟ್ಟಿದೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಪ್ರಸ್ತಾಪಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಬೆಂಗಳೂರು ನಗರದ ಬಿಜೆಪಿಯ ಮೂರು ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ನೇಮಕ
ಬಂಗಾಳ ಅಂತಿಮ ಮತಪಟ್ಟಿ ಬಿಡುಗಡೆ : 63 ಲಕ್ಷ ಹೆಸರು ಡಿಲೀಟ್‌