ಕುಚೇಷ್ಟೆ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ: ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಕಿವಿಮಾತು

KannadaprabhaNewsNetwork |  
Published : Aug 09, 2024, 12:36 AM ISTUpdated : Aug 09, 2024, 04:04 AM IST
ನಿಖಿಲ್‌ | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಸಂಬಂಧ ಅತ್ಯುತ್ತಮವಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಬೇರೆ ರೀತಿಯ ಘಟನೆಗಳಿಗೆ ಅವಕಾಶ ಕೊಡಬೇಡಿ, ಕಾರ್ಯಕರ್ತರು ತಾಳ್ಮೆಯಿಂದ ಸಮಾಧಾನಕರವಾಗಿ ವರ್ತಿಸಬೇಕು.

  ಮಂಡ್ಯ :  ಕೆಲವರು ಚೇಷ್ಟೆ ಮಾಡಲೆಂದೇ ಪಾದಯಾತ್ರಗೆ ಬಂದಿರುತ್ತಾರೆ. ಅವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ತಾಳ್ಮೆಯನ್ನೂ ಕಳೆದುಕೊಳ್ಳಬೇಡಿ ಎಂದು ಜೆಡಿಎಸ್‌ ಯುವ ಘಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ತಾಲೂಕಿನ ತೂಬಿನಕೆರೆಯಲ್ಲಿ ಬುಧವಾರ ನಡೆದ ಘಟನೆಯ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ, ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಮೂಲ ಉದ್ದೇಶವನ್ನು ಮರೆತು ಯಾರೋ ಕಿಡಿಗೇಡಿಗಳು ಮಾಡುವ ಕುಚೇಷ್ಟೆಗೆ ಪ್ರಾಮುಖ್ಯತೆ ನೀಡಬಾರದು ಎಂದರು.

ನಿನ್ನೆ ನಡೆದ ಘಟನೆಯ ಬಗ್ಗೆ ನಮ್ಮ ನಾಯಕರಾದ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶವನ್ನೂ ರವಾನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಸಂಬಂಧ ಅತ್ಯುತ್ತಮವಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಬೇರೆ ರೀತಿಯ ಘಟನೆಗಳಿಗೆ ಅವಕಾಶ ಕೊಡಬೇಡಿ, ಕಾರ್ಯಕರ್ತರು ತಾಳ್ಮೆಯಿಂದ ಸಮಾಧಾನಕರವಾಗಿ ವರ್ತಿಸುವಂತೆ ಮನವಿ ಮಾಡಿದರು.

ಯಾರೇ ಕಿಡಿಗೇಡಿಗಳು ನೋವು ಕೊಟ್ಟರೂ ಅದಕ್ಕೆ ಪ್ರತಿಕ್ರಿಯಿಸಬೇಡಿ. ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನಿಗಳಿದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದರು.

ಈ ಘಟನೆ ಎರಡು ಪಕ್ಷದ ಸಮನ್ವಯ ಸಮಿತಿ ಸದಸ್ಯರು ಕೇಂದ್ರಕ್ಕೆ ಮಾಹಿತಿ ಕೊಟ್ಟಿದ್ದಾರೆ. ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ನೋಡೋಣ. ಇದೇ ವೇಳೆ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಿದೇವೆ. ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ರೈತರು ನಮ್ಮ ಜೊತೆ ಹೆಜ್ಜೆ ಹಾಕುತ್ತಿದ್ದಾರೆ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ವೈದ್ಯಕೀಯ ಪರಿಹಾರ ನಿಧಿ ಹಣಕ್ಕೆ ಬೆಂಗಳೂರು ಪಾಲಿಕೆ ತಡೆ