ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ

Published : Oct 30, 2025, 11:19 AM IST
DK Shivakumar

ಸಾರಾಂಶ

ನವೆಂಬರ್‌ ಕ್ರಾಂತಿ, ಮುಖ್ಯಮಂತ್ರಿ ಬದಲಾವಣೆ, ದಲಿತ ಮುಖ್ಯಮಂತ್ರಿ ಚರ್ಚೆ ವಿಚಾರದ ಬಗ್ಗೆ ಯಾರೂ ಮಾತನಾಡಿ ದಣಿವು ಮಾಡಿಕೊಳ್ಳಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾರ್ಮಿಕವಾಗಿ ಹೇಳಿದ್ದಾರೆ.

 ಬೆಂಗಳೂರು :  ನವೆಂಬರ್‌ ಕ್ರಾಂತಿ, ಮುಖ್ಯಮಂತ್ರಿ ಬದಲಾವಣೆ, ದಲಿತ ಮುಖ್ಯಮಂತ್ರಿ ಚರ್ಚೆ ವಿಚಾರದ ಬಗ್ಗೆ ಯಾರೂ ಮಾತನಾಡಿ ದಣಿವು ಮಾಡಿಕೊಳ್ಳಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾರ್ಮಿಕವಾಗಿ ಹೇಳಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರವಾಗಿ ಪಕ್ಷದೊಳಗಿನ ಚರ್ಚೆ ಕುರಿತು ಮತ್ತೊಮ್ಮೆ ಸ್ಪಷ್ಟವಾಗಿ ಪ್ರತಿಕ್ರಿಯಿಸದ ಡಿ.ಕೆ. ಶಿವಕುಮಾರ್‌, ನವೆಂಬರ್ ಕ್ರಾಂತಿ, ಮುಖ್ಯಮಂತ್ರಿ ಬದಲಾವಣೆ ಮತ್ತು ದಲಿತ ಮುಖ್ಯಮಂತ್ರಿ ವಿಚಾರವಾಗಿ ಯಾರೂ ಚರ್ಚಿಸುವ ಅಗತ್ಯವಿಲ್ಲ. ಆ ಬಗ್ಗೆ ಮಾತನಾಡಿ ಯಾವುದೇ ನಾಯಕರು ದಣಿಯಬಾರದು ಎಂದು ಸಲಹೆ ನೀಡುತ್ತೇನೆ ಎಂದರು.

ರಾಮುಲು ಅವರೇ ಕಪ್ಪಕೊಟ್ಟಿದ್ದಾರೆ:

ಬಿಹಾರ ಚುನಾವಣೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ 300 ಕೋಟಿ ರು. ಕಪ್ಪ ಕಾಣಿಕೆ ನೀಡಿದ್ದಾರೆ ಎಂಬ ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿ, ಶ್ರೀರಾಮುಲು ಅವರೇ ಕಾಂಗ್ರೆಸ್‌ ಪಕ್ಷಕ್ಕೆ ಹಣ ನೀಡಿದ್ದಾರೆ. ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ ಎಂದು ವ್ಯಂಗ್ಯವಾಡಿದರು.

ರಾಹುಲ್‌ ರಾಜ್ಯಕ್ಕೆ ಬರುವುದಕ್ಕೆ ದಿನಾಂಕ ಅಂತಿಮವಾಗಿಲ್ಲ

ನವೆಂಬರ್‌ನಲ್ಲಿ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡುವ ವಿಚಾರ ಬಗ್ಗೆ ಮಾತನಾಡಿ, ಅವರು ರಾಜ್ಯಕ್ಕೆ ಬರುವುದಕ್ಕೆ ದಿನಾಂಕ ಅಂತಿಮವಾಗಿಲ್ಲ. ನಾನು ಮನವಿ ಸಲ್ಲಿಸಿದ್ದೇನೆ. ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಕಚೇರಿ ನಿರ್ಮಾಣಕ್ಕೆ ಸಂಬಂಧಿಸಿ ಜಾಗದ ಕಾಗದ ಪತ್ರ ಸಿದ್ಧಪಡಿಸಲಾಗುತ್ತಿದೆ. ಇನ್ನು, ಕಾಂಗ್ರೆಸ್ ಕಚೇರಿ ನಿರ್ಮಾಣ ವಿಚಾರದಲ್ಲಿ ಸಚಿವರು, ಸಂಸದರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ಸೇರಿ ಯಾರೆಲ್ಲ ಆಸಕ್ತಿ ತೋರಿಸಿದ್ದಾರೆ ಮತ್ತು ಯಾರು ತೋರಿಸಿಲ್ಲ ಎಂದು ವರದಿ ನೀಡುವಂತೆ ಹೈಕಮಾಂಡ್‌ ನಾಯಕರು ಹೇಳಿದ್ದಾರೆ. ನಾನು ವರದಿ ಸಿದ್ಧಪಡಿಸುತ್ತಿದ್ದೇನೆ. ಅದನ್ನು ಅವರಿಗೆ ಕಳುಹಿಸಲಾಗುವುದು. ನಂತರ ಹೈಕಮಾಂಡ್‌ ನಾಯಕರು ದಿನಾಂಕ ನಿಗದಿ ಮಾಡುತ್ತಾರೆ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಹಸಿವು ಮುಕ್ತ ‘ಕರ್ನಾಟಕ’ಸಿಎಂ ಸಿದ್ದು ಆಶಯಕ್ಕೆ ಬದ್ಧ : ಸಚಿವ ರಹೀಮ್‌ ಖಾನ್‌
ಆಧುನಿಕ ಭಾರತದ ಶಿಲ್ಪಿ, ಯುಗಪುರುಷ - ಅಟಲ್ ಬಿಹಾರಿ ವಾಜಪೇಯಿ