ಮಂಡ್ಯ ಮಂಜುನಾಥ
ಒಂದು ಹಾಗೂ ಒಂದಕ್ಕಿಂತ ಹೆಚ್ಚು ಅವಧಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದವರನ್ನು ಬದಲಾವಣೆ ಮಾಡಬೇಕೆಂಬ ಎಐಸಿಸಿ ಸೂಚನೆ ಮೇರೆಗೆ ಶುಕ್ರವಾರ (ಜು.೧೧)ರಂದು ಮಂಡ್ಯ ಜಿಲ್ಲೆಗೆ ವೀಕ್ಷಕರು ಭೇಟಿ ನೀಡುತ್ತಿದ್ದಾರೆ. ಇದರೊಂದಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಅಧಿಕೃತ ಚಾಲನೆ ದೊರಕಲಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಜಿಲ್ಲೆಗೆ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಭಾರತೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯ್‌ಕುಮಾರ್ ಅವರನ್ನು ಜಿಲ್ಲೆಗೆ ವೀಕ್ಷಕರನ್ನಾಗಿ ನೇಮಕ ಮಾಡಿದ್ದು, ಶುಕ್ರವಾರ ಭೇಟಿ ನೀಡಲಿರುವ ವೀಕ್ಷಕರು ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ೨೦೨೩ರ ವಿಧಾನಸಭೆ ಚುನಾವಣಾ ಅಭ್ಯರ್ಥಿಗಳು, ಲೋಕಸಭೆ ಚುನಾವಣೆ ಅಭ್ಯರ್ಥಿಗಳು, ಎಐಸಿಸಿ, ಕೆಪಿಸಿಸಿ ಸದಸ್ಯರು, ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಸದಸ್ಯರೊಂದಿಗೆ ಹೊಸ ಅಧ್ಯಕ್ಷರ ಆಯ್ಕೆ ಕುರಿತು ಸಮಾಲೋಚನೆ ನಡೆಸಿ, ಹೊಸ ಆಕಾಂಕ್ಷಿಗಳ ಕುರಿತು ಮಾಹಿತಿ ಸಂಗ್ರಹಿಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.ಏಳೂವರೆ ವರ್ಷ ಪೂರೈಸಿದ ಗಂಗಾಧರ್:
ಇವರ ಅಧಿಕಾರವಧಿಯಲ್ಲಿ ೨೦೧೮ರ ಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲೆಯಲ್ಲಿ ಏಳೂ ಸ್ಥಾನಗಳನ್ನೂ ಕಳೆದುಕೊಂಡು ತೀವ್ರ ಮುಖಭಂಗಕ್ಕೊಳಗಾಗಿತ್ತು. ಕಾಂಗ್ರೆಸ್ ಅಸ್ತಿತ್ವದಲ್ಲಿಲ್ಲದಿದ್ದರೂ ಆನಂತರ ಜಿಲ್ಲೆಯಲ್ಲಿ ನಡೆದ ಎರಡು ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವುದರೊಂದಿಗೆ ಅಧ್ಯಕ್ಷರಾಗಿ ಸಿ.ಡಿ.ಗಂಗಾಧರ್ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತವಾಗಿತ್ತು.
ಇದರ ನಡುವೆ ೨೦೨೧ರ ಫೆಬ್ರವರಿ ತಿಂಗಳಲ್ಲಿ ಸಿ.ಡಿ.ಗಂಗಾಧರ್ ಅಧ್ಯಕ್ಷರಾಗಿ ಅವಧಿ ಪೂರೈಸಿದ ಹಿನ್ನೆಲೆಯಲ್ಲಿ ಅವರನ್ನು ಬದಲಾಯಿಸಬೇಕೆಂಬ ಕೂಗು ಸ್ಥಳೀಯ ಮುಖಂಡರಿಂದ ಕೇಳಿಬಂದಿತ್ತು. ಹೊಸ ನೇಮಕಾತಿಗೆ ವೀಕ್ಷಕರನ್ನು ನೇಮಕ ಮಾಡುವುದು, ಆಕಾಂಕ್ಷಿಗಳ ಮನವಿ ಸ್ವೀಕರಿಸಿ ಕೆಪಿಸಿಸಿ ಕಚೇರಿಗೆ ವರದಿ ಸಲ್ಲಿಸಿ ಹೊಸ ಹೆಸರನ್ನು ಘೋಷಣೆ ಮಾಡಬೇಕು. ಒಂದು ವೇಳೆ ಹೊಸ ನೇಮಕಾತಿ ಪ್ರಕ್ರಿಯೆ ಸಾಧ್ಯವಾಗದಿದ್ದರೆ ಜಿಲ್ಲಾ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂದು ರಾಜ್ಯ ನಾಯಕರ ಮೇಲೆ ಒತ್ತಡ ಹಾಕಿದ್ದರು.
ಒಲಿದ ಮೈಷುಗರ್ ಅಧ್ಯಕ್ಷ ಸ್ಥಾನ:
ಕಾಂಗ್ರೆಸ್‌ನ ದೀರ್ಘಾವಧಿ ಅಧ್ಯಕ್ಷ:
ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಎಂ.ಚಿದಂಬರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ, ವಕ್ತಾರ ಸಿ.ಎಂ.ದ್ಯಾವಪ್ಪ ಅವರು ಪ್ರಮುಖವಾಗಿ ರೇಸ್‌ನಲ್ಲಿದ್ದಾರೆ. ಜಿಲ್ಲಾಧ್ಯಕ್ಷ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಎಂ.ಎಸ್.ಚಿದಂಬರ್ ಅವರು ಕಾಂಗ್ರೆಸ್ ಪಕ್ಷದೊಂದಿಗೆ ಅವರ ಕುಟುಂಬ ಸದಸ್ಯರ ಒಡನಾಟದ ಹಿನ್ನೆಲೆಯಲ್ಲಿ ಹುದ್ದೆಯನ್ನು ಕೇಳುತ್ತಿದ್ದಾರೆ. ಕಳೆದ ೨೦ ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ. ಎಲ್ಲಾ ಕ್ಷೇತ್ರಗಳ ಯುವ ಮುಖಂಡರೊಂದಿಗೆ ಒಡನಾಟವಿದೆ. ಯೂತ್ ಕಾಂಗ್ರೆಸ್ ಅಧ್ಯಕ್ಷ, ಪ್ರಚಾರ ಸಮಿತಿ ಅಧ್ಯಕ್ಷ, ಕೆಪಿಸಿಸಿ ಕೋ-ಆರ್ಡಿನೇಟರ್ ಆಗಿ ಮತ್ತು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ ಅನುಭವವಿದೆ. ಪಕ್ಷ ಸಂಘಟನೆ ಗುರಿಯೊಂದಿಗೆ ಹುದ್ದೆ ಆಕಾಂಕ್ಷಿಯಾಗಿದ್ದೇನೆ ಎಂದು ಎಂ.ಎಸ್.ಚಿದಂಬರ್ ಹೇಳಿದ್ದಾರೆ.
ಇನ್ನು ಅಧ್ಯಕ್ಷಗಾದಿ ಮೇಲೆ ಕಣ್ಣಿಟ್ಟಿರುವ ಯುವ ಮುಖಂಡ ಸಿ.ಎಂ.ದ್ಯಾವಪ್ಪ, ವಿದ್ಯಾರ್ಥಿ ದಿಸೆಯಿಂದಲೂ ಸಂಘಟನೆಯಲ್ಲಿದ್ದೇನೆ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ, ಪಕ್ಷದ ವಕ್ತಾರನಾಗಿ ಕಾರ್ಯನಿರ್ವಹಿಸಿದ ಅನುಭವವಿದೆ. ಜೊತೆಗೆ ಕಾಂಗ್ರೆಸ್ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆ ಸಮಯದಲ್ಲಿ ಮಂಡ್ಯದಿಂದ ಕಾಶ್ಮೀರದವರೆಗೆ ಹೆಜ್ಜೆ ಹಾಕಿದ ಜಿಲ್ಲೆಯ ಏಕೈಕ ಕಾಂಗ್ರೆಸ್ ಮುಖಂಡನಾಗಿದ್ದೇನೆ. ರಾಜ್ಯ ಮುಖಂಡರು ಅವಕಾಶ ಕೊಟ್ಟರೆ ಪಕ್ಷ ಕಟ್ಟುವ ಕೆಲಸ ಮಾಡುವೆ ಎಂಬ ಅದಮ್ಯ ಉತ್ಸಾಹದೊಂದಿಗೆ ನಾಯಕರೆದುರು ಬೇಡಿಕೆ ಇಟ್ಟಿದ್ದಾರೆ.ಪಕ್ಷಕ್ಕೆ ನಿಷ್ಠನಾಗಿ ಏಳೂವರೆ ವರ್ಷ ಕೆಲಸ ನಿರ್ವಹಿಸಿದ ತೃಪ್ತಿ ಇದೆ. ಅಧ್ಯಕ್ಷರ ಆಯ್ಕೆ ವಿಚಾರವಾಗಿ ವೀಕ್ಷಕರು ಶುಕ್ರವಾರ ಬರುತ್ತಿದ್ದಾರೆ. ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬಹುದು ಅಥವಾ ಹಳೇ ಅಧ್ಯಕ್ಷರನ್ನು ಮುಂದುವರೆಸಲೂಬಹುದು.-ಸಿ.ಡಿ.ಗಂಗಾಧರ್, ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ