ಜಾರಕಿಹೊಳಿ ಅಧ್ಯಕ್ಷರಾದರೂ ನನ್ನ ಬೆಂಬಲ - ನಮ್ಮಿಬ್ಬರ ನಡುವೆ ಸಮನ್ವಯತೆ ಇದೆ : ಈಶ್ವರ ಖಂಡ್ರೆ

Published : Apr 08, 2025, 05:34 AM IST
Eshwar Khandre

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಯಾರಿಗೆ ಅವಕಾಶ ಕೊಟ್ಟರೂ ಬೆಂಬಲಿಸುತ್ತೇವೆ. ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

 ಬೆಂಗಳೂರು :  ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಯಾರಿಗೆ ಅವಕಾಶ ಕೊಟ್ಟರೂ ಬೆಂಬಲಿಸುತ್ತೇವೆ. ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಅಲ್ಲದೆ ಇನ್ನು ನಾನು ಹಾಗೂ ಸತೀಶ್ ಜಾರಕಿಹೊಳಿ ಕಾರ್ಯಾಧ್ಯಕ್ಷರಾಗಿದ್ದವರು. ನಮ್ಮ ನಡುವೆ ಸಮನ್ವಯತೆ ಇದೆ. ಯಾರಿಗೆ ಅವಕಾಶ ನೀಡಿದರೂ ಬೆಂಬಲಿಸುತ್ತೇವೆ ಎಂದೂ ಹೇಳಿದ್ದಾರೆ.

ದೆಹಲಿಯಲ್ಲಿ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಿರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ವರಿಷ್ಠರನ್ನು ಆಗಾಗ ಭೇಟಿ ಮಾಡುತ್ತೇನೆ. ಪ್ರತಿ ಬಾರಿ ಭೇಟಿ ಆದಾಗ ವಿಶೇಷ ಇರುತ್ತದೆ. ಈಗಲೂ ಅಭಿವೃದ್ಧಿ ವಿಚಾರಗಳನ್ನು ಮಾತನಾಡಿದ್ದೇನೆ. ಅದನ್ನು ಬಿಟ್ಟು ಬೇರೇನೂ ಚರ್ಚೆ ಮಾಡಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಪ್ರಶ್ನೆಗೆ, ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿಯಿಲ್ಲ. ಮುಂದೆ ಹೈಕಮಾಂಡ್‌ ಈ ಬಗ್ಗೆ ತೀರ್ಮಾನ ಮಾಡಲಿದೆ. ನಾವು ಯಾವುದೇ ಬೇಡಿಕೆಯನ್ನೂ ಹೈಕಮಾಂಡ್‌ ಮುಂದೆ ಇಟ್ಟಿಲ್ಲ. ಇನ್ನು ನಾನು ಹಾಗೂ ಸತೀಶ್ ಜಾರಕಿಹೊಳಿ ಕಾರ್ಯಾಧ್ಯಕ್ಷರಾಗಿದ್ದವರು. ನಮ್ಮ ನಡುವೆ ಸಮನ್ವಯತೆ ಇದೆ. ಯಾರಿಗೆ ಅವಕಾಶ ನೀಡಿದರೂ ಬೆಂಬಲಿಸುತ್ತೇವೆ. ಎಲ್ಲರೂ ಸಹ ಇದನ್ನೇ ಹೇಳಿದ್ದಾರೆ ಎಂದು ಹೇಳಿದರು.

ಬಿಜೆಪಿ ಜನಾಕ್ರೋಶ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಬಿಜೆಪಿಯವರಿಗೆ ನೈತಿಕ ಕಳಕಳಿ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು. ಪೆಟ್ರೊಲ್‌, ಡೀಸೆಲ್‌ ಬೆಲೆ ಹೆಚ್ಚಳವಾಗಿದೆ. ಕೇಂದ್ರದಿಂದ ಯಾವುದೇ ಬೆಲೆ ಇಳಿಕೆ ಆಗಿಲ್ಲ. ಅದನ್ನು ಖಂಡಿಸದೆ ಇಲ್ಲಿ ನಾಟಕ ಮಾಡಿದರೆ ಪ್ರಯೋಜನವಿಲ್ಲ ಎಂದರು.

ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ!

ದೆಹಲಿ ಭೇಟಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ ಹಾಗೂ ಸತೀಶ್‌ ಜಾರಕಿಹೊಳಿ ಹೆಸರು ಸೂಚಿಸಿದ್ದಾರೆ ಎಂದು ಏ.4ರಂದು ‘ಕನ್ನಡಪ್ರಭ’ ಮಾತ್ರ ವರದಿ ಪ್ರಕಟಿಸಿತ್ತು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ