ನೇಹಾ ಹತ್ಯೆ ನಂತರವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ : ಡಿ.ರಾಮಲಿಂಗಪ್ಪ

KannadaprabhaNewsNetwork |  
Published : May 19, 2024, 01:52 AM ISTUpdated : May 19, 2024, 04:37 AM IST
ಸಿಕೆಬಿ-2  ಬಿಜೆಪಿ ಜಿಲ್ಲಾಧ್ಯಕ್ಷ ಡಿ.ರಾಮಲಿಂಗಪ್ಪ | Kannada Prabha

ಸಾರಾಂಶ

ಇಂತಹ ಪ್ರಕರಣಗಳ ಕುರಿತು ವಿರೋಧ ಪಕ್ಷಗಳು ಮಾತನಾಡಿದರೆ ರಾಜಕಾರಣ ಮಾಡುತ್ತಿದ್ದಾರೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರ ನಾಯಕರು ದೊಡ್ಡ ಮಾತುಗಳನ್ನಾಡುತ್ತಾರೆ. ಆದರೆ ಇಂತಹ ಕೃತ್ಯಗಳ ನಡೆಯದಂತೆ ಕ್ರಮ ಕೈಗೊಳ್ಳುತ್ತಿಲ್ಲ

ಚಿಕ್ಕಬಳ್ಳಾಪುರ :  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದೆ. ಅಪರಾಧ ಕೃತ್ಯಗಳನ್ನು ಹತ್ತಿಕ್ಕಬೇಕಾಗಿರುವ ಸರ್ಕಾರವು ಸಂವೇದನಾಶೀಲತೆ ಇಲ್ಲದವರಂತೆ ವರ್ತಿಸುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಆರೋಪಿಗಳಿಗೆ ಕಾನೂನಿನ ಭಯವೇ ಹಾಗೂ ಪೊಲೀಸರ ಭಯವೇ ಇಲ್ಲ. ಏನು ಮಾಡಿದರೂ ನಡೆಯುತ್ತೆ ಎನ್ನುವ ಭಾವನೆ ಕಿಡಿಗೇಡಿಗಳಲ್ಲಿ ಮೂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಿ. ರಾಮಲಿಂಗಪ್ಪ ಹೇಳಿದರು.

ಎಎಎಎಎಎಎಎಎಎಎಎಎಎಎಎಎಎಎಎಎಎಎಎಎಎಎಎಎಎಎನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನೇಹಾ ಕೊಲೆ ಪ್ರಕರಣ ನಡೆದ ನಂತರವೂ ಪೊಲೀಸರು, ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಇದರಿಂದ ಅಂಜಲಿ ಕೊಲೆಯಂತಹ ಆಘಾತಕಾರಿ ಬೆಳವಣಿಗೆಗೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದೂರು ನೀಡಿದರೂ ನಿರ್ಲಕ್ಷ್ಯ

ಅಂಜಲಿಯ ಸಂಬಂಧಿಕರು ಆರೋಪಿಯು ಕಿರುಕುಳ ನೀಡುತ್ತಿರುವ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಕೊಲೆಯಾಗಲು ಕಾರಣವಾಗಿದೆ. ಆರೋಪಿ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದರೆ ಈ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ. ಪೊಲೀಸ್ ಠಾಣೆಗಳು ಇರುವುದಾದರೂ ಯಾಕೆಂದು ಪ್ರಶ್ನಿಸಿದರು.

ಪೊಲೀಸರ ಅಮಾನತಿನಿಂದ ಪ್ರಕರಣಕ್ಕೆ ನ್ಯಾಯ ಸಿಗುವುದಿಲ್ಲ. ಇಂತಹ ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ ತಂಡದ ರಚನೆ ಮಾಡಬೇಕು. ಆರೋಪಿಗೆ ಗಲ್ಲು ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು, ಅಂಜಲಿ ಕುಟುಂಬಸ್ಥರಿಗೆ ಕೂಡಲೇ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು.

ಕೃತ್ಯ ತಡೆಗೆ ಕ್ರಮ ಕೈಗೊಳ್ಳುತ್ತಿಲ್ಲ

ಇಂತಹ ಪ್ರಕರಣಗಳ ಕುರಿತು ವಿರೋಧ ಪಕ್ಷಗಳು ಮಾತನಾಡಿದರೆ ರಾಜಕಾರಣ ಮಾಡುತ್ತಿದ್ದಾರೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರ ನಾಯಕರು ದೊಡ್ಡ ಮಾತುಗಳನ್ನಾಡುತ್ತಾರೆ. ಆದರೆ ಇಂತಹ ಕೃತ್ಯಗಳ ನಡೆಯದಂತೆ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಹತ್ಯಾಕಾಂಡಗಳು ನಡೆದಿವೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಇನ್ನಾದರೂ ಗಾಢನಿದ್ದೆಯಿಂದ ಎದ್ದು, ರಾಜ್ಯ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು,ನಿಮ್ಮ ಕೈಯಲ್ಲಿ ಕಾನೂನು ಕಾಪಾಡಲು ಆಗೋಲ್ಲ ಎಂದಾದಲ್ಲಿ ಕೂಡಲೇ ಜಾಗ ಖಾಲಿ ಮಾಡಿ ಎಂದು ಕಿಡಿಕಾರಿದ ಅವರು, ರಾಜ್ಯದಲ್ಲಿ ಶಾಂತಿ ನೆಲಸಲು ನಮ್ಮ ಹೋರಾಟವನ್ನು ಕೈ ಬಿಡಲ್ಲ. ಅಲ್ಲದೆ ಜನವೇ ಸರ್ಕಾರದ ವಿರುದ್ಧ ತಿರುಗಿ ಬೀಳುವ ದಿನಗಳು ದೂರವಿಲ್ಲ ಎಂದು ಎಚ್ಚರಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ವೈದ್ಯಕೀಯ ಪರಿಹಾರ ನಿಧಿ ಹಣಕ್ಕೆ ಬೆಂಗಳೂರು ಪಾಲಿಕೆ ತಡೆ