ಸಚಿವ ಸ್ಥಾನಕ್ಕಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ, ಹರಕೆ

Published : Jun 01, 2026, 11:52 AM IST
 Priyank Kharge

ಸಾರಾಂಶ

ಡಿ.ಕೆ.ಶಿವಕುಮಾರ ನಾಯಕತ್ವದ ಸರ್ಕಾರದಲ್ಲಿ ಹಿರಿಯ ನಾಯಕ, ದಾವಣಗೆರೆ ಉತ್ತರ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್‌ ಅವರು ಉಪ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಎಸ್‌ಎಸ್‌ಎಂಗೆ ಡಿಸಿಎಂ ಪಟ್ಟಕ್ಕೆ 101 ಈಡುಗಾಯಿ

ದಾವಣಗೆರೆ: ಡಿ.ಕೆ.ಶಿವಕುಮಾರ ನಾಯಕತ್ವದ ಸರ್ಕಾರದಲ್ಲಿ ಹಿರಿಯ ನಾಯಕ, ದಾವಣಗೆರೆ ಉತ್ತರ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್‌ ಅವರು ಉಪ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಲಾಯಿತು. 101 ತೆಂಗಿನಕಾಯಿ ಒಡೆದು, ದೇವಿಯನ್ನು ಪ್ರಾರ್ಥಿಸಲಾಯಿತು. ಈ ವೇಳೆ ಮಾತನಾಡಿದ ಎಸ್‌.ಎಸ್‌.ಮಲ್ಲಿಕಾರ್ಜುನ ಅಭಿಮಾನಿ ಬಳಗದ ಮುಖಂಡ, ಕನ್ನಡಪರ ಹಿರಿಯ ಹೋರಾಟಗಾರ ನಾಗೇಂದ್ರ ಬಂಡೀಕರ್, ದಾವಣಗೆರೆ ಕ್ಷೇತ್ರದಿಂದ 4 ಸಲ ಶಾಸಕರಾಗಿ, ಮೂರು ಸಲ ಸಚಿವರಾಗಿ, ಆಶ್ರಯ ಮನೆಗಳನ್ನು ನಿರ್ಮಿಸಿ, ಸೂರುರಹಿತ ಕುಟುಂಬಗಳಿಗೆ ಹಂಚಿಕೆ ಮಾಡುವ ಮೂಲಕ ಎಸ್ಸೆಸ್ಸೆಂ ಐತಿಹಾಸಿಕ ದಾಖಲೆಗೆ ಕಾರಣರಾಗಿದ್ದಾರೆ. ಇಂತಹ ಜನಪರ, ಅಭಿವೃದ್ಧಿ ಪರ, ದೂರದೃಷ್ಟಿಯ ಎಸ್‌.ಎಸ್‌.ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಯುವ ಮುಖಂಡ ಕೇರಂ ವಿ.ಗಣೇಶ ಮಾತನಾಡಿ, ಸರ್ವಧರ್ಮೀಯರನ್ನು ಸಮಾನವಾಗಿ ಕಾಣುವ, ಎಲ್ಲರನ್ನೂ ಜೊತೆ ಜೊತೆಯಾಗಿ ಕೊಂಡೊಯ್ಯುವ ದಾವಣಗೆರೆ ಉತ್ತರ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡಬೇಕು. ಎಸ್ಸೆಸ್ಸೆಂ ಉಪ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಒಡೆಯುವ ಮೂಲಕ ಪ್ರಾರ್ಥನೆ ಸಲ್ಲಿಸಲಾಗಿದೆ. ಮೊದಲ ಪಟ್ಟಿಯಲ್ಲೇ ಎಸ್‌.ಎಸ್‌.ಮಲ್ಲಿಕಾರ್ಜುನ ಅವರಿಗೆ ಸಂಪುಟದಲ್ಲಿ ಪ್ರಮುಖ ಸಚಿವ ಖಾತೆ ನೀಡಿ. ಉಪ ಮುಖ್ಯಮಂತ್ರಿ ಸ್ಥಾನವನ್ನೂ ನೀಡಿ ಎಂದು ಆಗ್ರಹಿಸಿದರು.

ಸತೀಶ್‌ಗೆ ಕೆಪಿಸಿಸಿ, ಲಕ್ಷ್ಮೀ ಮಂತ್ರಿ ಮಾಡಲು ಆಗ್ರಹ

ಬೆಳಗಾವಿ: ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಜೂನ್‌ 3ರಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂತಸ ಮನೆ ಮಾಡಿದೆ.

ಇದೇ ವೇಳೆ, ಬೆಳಗಾವಿ ಜಿಲ್ಲೆಯ ನಾಯಕರಿಗೆ ಉನ್ನತ ಹುದ್ದೆಗೆ ಒತ್ತಾಯಿಸಿ ಸ್ಥಳೀಯ ಕಾಂಗ್ರೆಸ್‌ ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ. ಡಿಕೆಶಿ ಸಂಪುಟದಲ್ಲಿ ಬೆಳಗಾವಿ ಜಿಲ್ಲೆಗೆ ನಾಲ್ಕು ಸಚಿವ ಸ್ಥಾನ ಸಿಗುವಂತೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಚನ್ನಮ್ಮ ವೃತ್ತದಲ್ಲಿರುವ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು.

ಸತೀಶ ಜಾರಕಿಹೊಳಿ‌ಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಹಾಗೂ ಸಚಿವ ಸ್ಥಾನ, ಲಕ್ಷ್ಮೀ ಹೆಬ್ಬಾಳ್ಕರ್ ಗೆ ಡಿಸಿಎಂ, ಲಕ್ಷ್ಮಣ ಸವದಿಗೆ ಮಂತ್ರಿ ಹಾಗೂ ಆಸೀಫ್ ಸೇಠ್ ಗೆ ಮಂತ್ರಿ ಸ್ಥಾನ ಕೊಡಲು ಮನವಿ ಮಾಡಿದರು.

ಈ ವೇಳೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಸತೀಶ ಜಾರಕಿಹೊಳಿ ಅವರ ಸೇವೆ, ಪಕ್ಷ ನಿಷ್ಠೆ ಮತ್ತು ಹಿರಿತನವನ್ನು ಕಾಂಗ್ರೆಸ್‌ ಹೈಕಮಾಂಡ್‌ ಪರಿಗಣಿಸಬೇಕು. ಸತೀಶ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷರಾಗಲಿ ಮತ್ತು ಅವರಿಗೆ ಸಚಿವ ಸ್ಥಾನ ಸಿಗಲಿ. ಡಿ.ಕೆ.ಶಿವಕುಮಾರ್ ಅವರಿಗೆ ಭವಿಷ್ಯದಲ್ಲಿ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ, ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನ ಕಾಯಿಗಳನ್ನು ಒಡೆದು ಪ್ರಾರ್ಥಿಸಿದ್ದೇವೆ ಎಂದರು.

ಈ ವೇಳೆ, ಸತೀಶ್ ಜಾರಕಿಹೊಳಿ ಪರ ಘೋಷಣೆಗಳನ್ನು ಕೂಗಲಾಯಿತು.

ಈ ವೇಳೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಸತೀಶ ಜಾರಕಿಹೊಳಿ ಅವರ ಸೇವೆ, ಪಕ್ಷ ನಿಷ್ಠೆ ಮತ್ತು ಹಿರಿತನವನ್ನು ಕಾಂಗ್ರೆಸ್‌ ಹೈಕಮಾಂಡ್‌ ಪರಿಗಣಿಸಬೇಕು. ಸತೀಶ ಜಾರಕಿಹೊಳಿಯವರು ಕೆಪಿಸಿಸಿ ಅಧ್ಯಕ್ಷರಾಗಲಿ ಮತ್ತು ಅವರಿಗೆ ಸಚಿವ ಸ್ಥಾನ ಸಿಗಲಿ. ಡಿ.ಕೆ.ಶಿವಕುಮಾರ್ ಅವರಿಗೆ ಭವಿಷ್ಯದಲ್ಲಿ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ, ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನ ಕಾಯಿಗಳನ್ನು ಒಡೆದು ಪ್ರಾರ್ಥಿಸಿದ್ದೇವೆ ಎಂದರು.

ಈ ವೇಳೆ, ಸತೀಶ್ ಜಾರಕಿಹೊಳಿ ಪರ ಘೋಷಣೆಗಳನ್ನು ಕೂಗಲಾಯಿತು.

ಪ್ರಿಯಾಂಕ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪ್ರಾರ್ಥನೆ

ಬೀದರ್‌: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಪ್ರಿಯಾಂಕ್‌ ಖರ್ಗೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಎರಡು ಬಾರಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್‌ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್‌ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಹುಮನಾಬಾದ್‌ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹಾಗೂ ರಾಜರಾಜೇಶ್ವರ ದೇವಸ್ಥಾನದ ಮುಂದೆ ತಲಾ 101 ತೆಂಗಿನ ಕಾಯಿ ಒಡೆಯುವ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ವೀರಭದ್ರೇಶ್ವರ ಹಾಗೂ ರಾಜ ರಾಜೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ, ಪ್ರಿಯಾಂಕ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ.ಚಂದ್ರಶೇಖರ ಪಾಟೀಲ್‌ಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ, ನಗರದ ಅಂಬೇಡ್ಕರ್‌ ವೃತ್ತದಲ್ಲಿ ಪಾಟೀಲ್‌ ಪರಿವಾರದ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ರ್‍ಯಾಲಿ ನಡೆಸಿದರು.

ನಗರದ ಶಿವಾಜಿ ವೃತ್ತದಿಂದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಸಿ, ಪ್ರಿಯಾಂಕ ಖರ್ಗೆಗೆ ಡಿಸಿಎಂ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ.ಚಂದ್ರಶೇಖರ ಪಾಟೀಲ್‌ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಡಿಕೆಶಿ, ಸಿದ್ದು ಇಂದು ದೆಹಲಿಗೆ ಪ್ರಯಾಣ
2 ಹಂತದಲ್ಲಿ ಸಂಪುಟ ರಚನೆ : ಖರ್ಗೆ - ಜೂ.3ಕ್ಕೆ ಸಿಎಂ ಜತೆ 10 ಸಚಿವರ ಪ್ರಮಾಣ