ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಹಾಗೂ ಬಡಾವಣೆ ಅಭಿವೃದ್ಧಿಯಲ್ಲಿ ವ್ಯಾಪಕ ನಿಯಮ ಉಲ್ಲಂಘನೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಮುಡಾ ಮಾಜಿ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಬದಲಿ ನಿವೇಶನ ಅಕ್ರಮವಾಗಿ ನೀಡಲಾಗಿದೆ ಎಂದು ಪ್ರತಿಪಕ್ಷಗಳು ಹೋರಾಟ ನಡೆಸಿದರೂ ಈವರೆಗೆ ಯಾರೊಬ್ಬರ ವಿರುದ್ಧವೂ ಶಿಸ್ತುಕ್ರಮ ಆಗಿರಲಿಲ್ಲ. ಈಗ ದಿನೇಶ್ ಅವರನ್ನು ಸರ್ಕಾರ ಅಮಾನತು ಮಾಡಿ, ಮೊದಲ ವಿಕೆಟ್ ಬಲಿ ಪಡೆದಂತಾಗಿದೆ.