ಮಂಡ್ಯ ಮಂಜುನಾಥ
ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಎನ್ನುವುದು ದೃಢಪಟ್ಟಿದೆ. ಪಕ್ಷದ ಮುಖಂಡರು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಮಂಡ್ಯ ಅಖಾಡ ಪ್ರವೇಶಿಸಲು ಎಚ್‌ಡಿಕೆ ನಿರ್ಧರಿಸಿದ್ದಾರೆ. ತಮ್ಮ ಸ್ಪರ್ಧೆಯೊಂದಿಗೆ ಜಿಲ್ಲೆಯೊಳಗೆ ಅಸ್ತಿತ್ವ ಕಳೆದುಕೊಂಡಿರುವ ಜೆಡಿಎಸ್‌ಗೆ ಪುನಶ್ಚೇತನ ನೀಡುವ ಗುರಿಯನ್ನು ದಳಪತಿ ಹೊಂದಿದ್ದಾರೆ.
೨೦೧೯ರ ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖಿಲ್ ಸೋಲಿನ ಸೇಡು ತೀರಿಸಿಕೊಳ್ಳುವುದು. ಸೋಲಿನಿಂದ ದಿಕ್ಕೆಟ್ಟಿರುವ ಸ್ಥಳೀಯ ಜೆಡಿಎಸ್ ನಾಯಕರಿಗೆ ಶಕ್ತಿ ತುಂಬುವುದು. ಮಂಡ್ಯ ಜಿಲ್ಲೆಯನ್ನು ಜೆಡಿಎಸ್ ಭದ್ರಕೋಟೆಯನ್ನಾಗಿಯೇ ಉಳಿಸಿಕೊಂಡು ಪಕ್ಷವನ್ನು ಬಲವರ್ಧನೆಗೊಳಿಸುವ ಮಹತ್ವಾಕಾಂಕ್ಷೆ ಕುಮಾರಸ್ವಾಮಿ ಅವರದ್ದಾಗಿದೆ.ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕ ಎನ್.ಚಲುವರಾಯಸ್ವಾಮಿ ನಡುವಿನ ನೇರ ಯುದ್ಧಕಣವಾಗಿ ಮಂಡ್ಯ ಲೋಕಸಭೆ ಚುನಾವಣಾ ಕಣ ಮಾರ್ಪಟ್ಟಿದೆ. ಪ್ರತಿ ಹಂತದಲ್ಲೂ ಜೆಡಿಎಸ್ ಹಿನ್ನಡೆಗೆ ಕಾರಣರಾಗುತ್ತಿರುವ ಕಾಂಗ್ರೆಸ್ ನಾಯಕರನ್ನು ಕಟ್ಟಿಹಾಕಲು ಎಚ್.ಡಿ.ಕುಮಾರಸ್ವಾಮಿಯೇ ಈಗ ಸಾರಥ್ಯ ವಹಿಸಿದ್ದಾರೆ .
ರಾಜಕೀಯವಾಗಿ ಶಕ್ತಿ ತುಂಬಿರುವ ರಾಮನಗರ ಜಿಲ್ಲೆಯನ್ನು ಬಿಟ್ಟು ಬರುವ ತೊಳಲಾಟಕ್ಕೆ ಸಿಲುಕಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಕೊನೆಗೂ ಮಂಡ್ಯ ಕ್ಷೇತ್ರದಿಂದ ತಾವೇ ಕಣಕ್ಕಿಳಿಯುವ ದೃಢ ನಿರ್ಧಾರ ಮಾಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರಗಳ ಪೈಕಿ ಕೆ.ಆರ್.ಪೇಟೆ ಕ್ಷೇತ್ರದಲ್ಲಷ್ಟೇ ಜೆಡಿಎಸ್ ಅಸ್ತಿತ್ವ ಕಾಯ್ದುಕೊಂಡಿದ್ದು, ೭ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಧಿಪತ್ಯವಿದೆ. ಆದರೂ ದೃತಿಗೆಡದ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆ ಗೆದ್ದೇ ಗೆಲ್ಲುವೆನೆಂಬ ಉತ್ಸಾಹದಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಇದರಿಂದ ಜೆಡಿಎಸ್ ಮುಖಂಡರು-ಕಾರ್ಯಕರ್ತರಲ್ಲಿ ಹೊಸ ಉಮ್ಮಸ್ಸು, ಉತ್ಸಾಹ ಮೂಡಿದೆ. ಸ್ಥಳೀಯ ಜೆಡಿಎಸ್ ನಾಯಕರಿಗೆ ಹೊಸ ಶಕ್ತಿ ಬಂದಂತಾಗಿದ್ದು, ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವುದಕ್ಕೆ ರೆಡಿಯಾಗಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದವರಲ್ಲಿ ಒಬ್ಬರು ಸ್ಪರ್ಧಿಸುವಂತೆ ಸ್ಥಳೀಯ ಜೆಡಿಎಸ್ ನಾಯಕರು ದಳಪತಿಗಳ ಮೇಲೆ ಒತ್ತಡ ತಂದಿದ್ದರು. ಸ್ಪರ್ಧೆಗೆ ದೇವೇಗೌಡರು ಮತ್ತು ನಿಖಿಲ್ ಕುಮಾರಸ್ವಾಮಿ ಆಸಕ್ತಿ ತೋರಿರಲಿಲ್ಲ. ಆದರೆ, ಕುಮಾರಸ್ವಾಮಿ ಅವರು ಕೊನೆಯವರೆಗೂ ತಮ್ಮ ಸ್ಪರ್ಧೆಯ ಗುಟ್ಟನ್ನು ಬಿಟ್ಟುಕೊಡದೆ ಒಂದೆಡೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನೇ ಅಭ್ಯರ್ಥಿ ಎಂದು ಬಿಂಬಿಸುತ್ತಾ, ಮತ್ತೊಂದೆಡೆ ಜಿಲ್ಲೆಯೊಳಗಿನ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಕಾಂಗ್ರೆಸ್‌ನವರ ದಿಕ್ಕುತಪ್ಪಿಸುವ ತಂತ್ರಗಾರಿಕೆಯನ್ನು ನಡೆಸಿಕೊಂಡು ಬಂದರು.
ರಾಜಕೀಯ ಪರಿಸ್ಥಿತಿ ಅವಲೋಕನ:
ರಣತಂತ್ರ-ಪ್ರತಿತಂತ್ರ: