ಚುನಾವಣಾ ಹೊಸ್ತಿಲಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಬಿಜೆಪಿ ಸೇರ್ಪಡೆ

KannadaprabhaNewsNetwork |  
Published : Apr 18, 2024, 02:24 AM ISTUpdated : Apr 18, 2024, 05:23 AM IST
Akhanda Srinivas Murthy | Kannada Prabha

ಸಾರಾಂಶ

ಕಾಂಗ್ರೆಸ್‌ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

  ಬೆಂಗಳೂರು : ಕಾಂಗ್ರೆಸ್‌ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬುಧವಾರ ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಖಂಡ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಶೋಭಾ ಕರಂದ್ಲಾಜೆ ಅವರು 2.5 ಲಕ್ಷದಿಂದ 3 ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಹೇಳಿದರು.

ಚುನಾವಣೆ ಸಂದರ್ಭದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರ ಸೇರ್ಪಡೆ ಪಕ್ಷಕ್ಕೆ ದೊಡ್ಡ ಶಕ್ತಿ ಕೊಟ್ಟಂತಾಗಿದೆ. ಡಿಜೆ ಹಳ್ಳಿ- ಕೆಜಿ ಹಳ್ಳಿ ಹಿಂದೂ ಮುಸ್ಲಿಂ ಗಲಾಟೆ ಆದಾಗ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯನ್ನು ಸುಡಲಾಗಿತ್ತು. ಆಗ ಕಾಂಗ್ರೆಸ್‍ನವರು ಬೆಂಬಲ ಕೊಡಲಿಲ್ಲ. ನಾವು ಶ್ರೀನಿವಾಸಮೂರ್ತಿ ಅವರ ಜೊತೆ ಗಟ್ಟಿಯಾಗಿ ನಿಂತಿದ್ದೆವು ಎಂದು ಸ್ಮರಿಸಿದರು.

ತಮ್ಮ ಬೆಂಬಲಿಗರ ಜೊತೆ ಅಖಂಡ ಶ್ರೀನಿವಾಸಮೂರ್ತಿ ಅವರ ಪಕ್ಷ ಸೇರುವಿಕೆಯಿಂದ ಆನೆ ಬಲ ಬಂದಂತಾಗಿದೆ. ಅವರಿಗೆ ಎಲ್ಲರ ಪರವಾಗಿ ಸ್ವಾಗತಿಸುವೆ ಎಂದರು.

ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಹರೀಶ್ ಮಾತನಾಡಿ, ಧರ್ಮ- ಅಧರ್ಮದ ನಡುವೆ ಯುದ್ಧ ನಡೆಯುತ್ತಿದೆ. ಅಖಂಡ ಶ್ರೀನಿವಾಸಮೂರ್ತಿ ಅವರು ಧರ್ಮದ ಪರವಾಗಿ ಬಿಜೆಪಿ ಸೇರಿದ್ದಾರೆ ಎಂದು ತಿಳಿಸಿದರು.

ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಮಂಜುಳಾ, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಗೋವಿಂದರಾಜ್, ಪುಲಕೇಶಿ ನಗರದ ಮಂಡಲ ಅಧ್ಯಕ್ಷ ರವಿ, ಮುಖಂಡರಾದ ಮುರಳಿ, ಸೂರ್ಯಕಾಂತ ರಾವ್ ಮತ್ತಿತರರು ಭಾಗವಹಿಸಿದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ