ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ

Published : Nov 10, 2026, 12:20 PM IST
DK Shivakumar,

ಸಾರಾಂಶ

ಅಲ್ಪಸಂಖ್ಯಾತರ ಹಿತಾಸಕ್ತಿ ಕಾಪಾಡಲು ಮತ್ತು ಅವರ ಪರ ಧ್ವನಿಯಾಗಲು ಸರ್ಕಾರ ಬದ್ಧವಾಗಿದ್ದು, ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಅಲ್ಪಸಂಖ್ಯಾತರ ಹಿತಾಸಕ್ತಿ ಕಾಪಾಡಲು ಮತ್ತು ಅವರ ಪರ ಧ್ವನಿಯಾಗಲು ಸರ್ಕಾರ ಬದ್ಧವಾಗಿದ್ದು, ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಕರ್ನಾಟಕ ಉರ್ದು ಅಕಾಡೆಮಿ ಪುರಭವನದಲ್ಲಿ ಆಯೋಜಿಸಿದ್ದ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಹಾಗೂ ‘ಉರ್ದು ಹಬ್ಬ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೆಲವರಿಗೆ ಅಲ್ಪಸಂಖ್ಯಾತ ಸಮುದಾಯಗಳ ಬಗ್ಗೆ ನಂಬಿಕೆ ಇಲ್ಲದಿರಬಹುದು. ಬೇರೆಯವರಿಗೆ ನಂಬಿಕೆ ಇಲ್ಲ ಎಂಬ ಕಾರಣಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದರು.

 ಸಮಸ್ಯೆ ಪರಿಹಾರಕ್ಕೆ ಸಭೆ: 

ಉರ್ದು ಅಕಾಡೆಮಿಯ ಚಟುವಟಿಕೆಗಳಿಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು. ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಮುಂದಿನ ವಾರ ಕ್ರೈಸ್ತ, ಮುಸ್ಲಿಂ, ಜೈನ, ಬೌದ್ದ ಸೇರಿ ಅಲ್ಪಸಂಖ್ಯಾತ ಸಮುದಾಯಗಳ ನಾಯಕರು ಹಾಗೂ ಶಾಸಕರ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು. ಉರ್ದು ಹಬ್ಬ ಕಾರ್ಯಕ್ರಮಕ್ಕೆ ಯಾವ ಮುಖ್ಯಮಂತ್ರಿಯೂ ಆಗಮಿಸಿಲ್ಲ. ತಮಗೆ ಆಗಮಿಸಿ ಶುಭ ಕೋರಬೇಕು ಎಂದು ಆಯೋಜಕರು ಮನವಿ ಮಾಡಿದ್ದರು. ಆದ್ದರಿಂದ ಬಹಳ ಸಂತೋಷದಿಂದ ಸಮಾರಂಭಕ್ಕೆ ಆಗಮಿಸಿದ್ದೇನೆ. ಭಾಷೆಗಳು ಬೇರೆ ಬೇರೆ ಇರಬಹುದು. ಆದರೆ ಮಾನವೀಯತೆ, ಮಾನವ ಧರ್ಮವೇ ಮುಖ್ಯ ಎಂದರು.

ಉರ್ದು ಹೃದಯದ ಭಾಷೆ

ಉರ್ದು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಭಾಷೆಯಲ್ಲ, ಹೃದಯದ ಭಾಷೆ. ಉರ್ದು ವಿಶ್ವಮಟ್ಟದ ಭಾಷೆಯಾಗಿದ್ದು, ಇದಕ್ಕೆ ಗಡಿಯೇ ಇಲ್ಲವಾಗಿದೆ. ಸಾಹಿತ್ಯ, ಕಾವ್ಯ ಮತ್ತು ಶಾಯಿರಿ ಮೂಲಕ ಜನರ ಮನಸ್ಸನ್ನು ಮುಟ್ಟುವ ಶಕ್ತಿ ಉರ್ದು ಭಾಷೆಗಿದೆ. ಉರ್ದು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸರ್ಕಾರ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಫಾರಿನ್‌ನಿಂದ ಮರಳಿದ ಸ್ಟಿಂಗ್‌ ಕೃಪಾ ಆಳ್ವಗೆ ಪೊಲೀಸ್‌ ಗ್ರಿಲ್‌ - 4 ತಾಸು ವಿಚಾರಣೆ
ಹಾಸನಾಂಬೆಯ ಮೇಲಾಣೆ-ಡೀಸಿ ವರ್ಗ ತಡೆಗೆ ನಯಾಪೈಸೆ ಹಣ ಪಡೆದಿಲ್ಲ: ಶಿವಲಿಂಗೇಗೌಡ