‘ಮುಡಾ’ ಹಗರಣದ ಕುರಿತು ಸರ್ಕಾರ ತಪ್ಪೊಪ್ಪಿಗೆ: ಮಾಜಿ ಆಯುಕ್ತರ ಅಮಾನತಿಂದ ಇದು ಸಾಬೀತು

Published : Sep 04, 2024, 06:31 AM IST
MUDA Case CM Siddaramaiah

ಸಾರಾಂಶ

ಮುಡಾದ ಮಾಜಿ ಆಯುಕ್ತರನ್ನು ಅಮಾನತು ಮಾಡುವ ಮೂಲಕ ಹಿಂದಿನ ನಿರ್ಣಯಗಳು ಹಾಗೂ ನಿರ್ದೇಶನಗಳು ತಪ್ಪಾಗಿವೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ಹೇಳಿದೆ.

ಬೆಂಗಳೂರು :  ಮುಡಾದ ಮಾಜಿ ಆಯುಕ್ತರನ್ನು ಅಮಾನತು ಮಾಡುವ ಮೂಲಕ ಹಿಂದಿನ ನಿರ್ಣಯಗಳು ಹಾಗೂ ನಿರ್ದೇಶನಗಳು ತಪ್ಪಾಗಿವೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ಹೇಳಿದೆ. 

ಮಂಗಳವಾರ ಪ್ರತ್ಯೇಕವಾಗಿ ಪತ್ರಿಕಾಗೋಷ್ಠಿ ನಡೆಸಿದ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹಾಗೂ ವಿಧಾನಪರಿಷತ್ತಿನ ಸದಸ್ಯ ಎನ್‌.ರವಿಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿರುವುದು ಸಾಬೀತಾದಂತಾಗಿದೆ ಎಂದು ಆರೋಪಿಸಿದರು.

ಅಶೋಕ್‌ ಮಾತನಾಡಿ, 50:50 ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನ ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಪರಿಗಣಿಸಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ ಪೂರ್ವಾನ್ವಯವಾಗುವಂತೆ 50:50 ಅನುಪಾತದಲ್ಲಿ ನೀಡಿರುವುದೂ ಸಹ ತಪ್ಪು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದರು.

PREV

Recommended Stories

ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!