ಗ್ಯಾರಂಟಿಗಳಿಂದ ಬೊಕ್ಕಸ ಬರಿದಾಗಿಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

KannadaprabhaNewsNetwork |  
Published : Jul 01, 2025, 12:47 AM ISTUpdated : Jul 01, 2025, 08:16 AM IST
Minister Chaluvarayaswamy

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರ 16 ವರ್ಷಗಳ ಆಯವ್ಯಯ ಮಂಡನೆಯ ಅನುಭವದೊಂದಿಗೆ ಗ್ಯಾರಂಟಿ ಯೋಜನೆಗಳು ಯಶಸ್ಸು ಕಂಡಿವೆ. ಸರ್ಕಾರವು ಸದಾ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸದಲ್ಲಿ ನಿರತವಾಗಿದೆ. ಆದರೆ, ಅದನ್ನು ಪ್ರಚಾರ ಮಾಡುವ ಕೆಲಸದಲ್ಲಿ ಹಿಂದುಳಿದಿದೆ.

 ಮಂಡ್ಯ :  ಪಂಚ ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸ ಬರಿದಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹದಿನಾರು ವರ್ಷಗಳ ಆಯವ್ಯಯ ಮಂಡನೆಯ ಅನುಭವದಿಂದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಶಸ್ಸು ಕಂಡಿವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಬಾಗಿನ ಅರ್ಪಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಂಚ ಗ್ಯಾರಂಟಿಗಳನ್ನು ಸರ್ಕಾರ ಘೋಷಿಸಿದ ಸಂದರ್ಭದಲ್ಲಿ ವಿಪಕ್ಷಗಳು ಆರ್ಥಿಕ ಸ್ಥಿತಿಗತಿ ತಿಳಿಯದೆ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಇದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವುದು ಕಷ್ಟ. ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದು ಟೀಕಿಸಿದ್ದವು. ಆದರೆ, ಇಂದು ಪಂಚ ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ 16 ವರ್ಷಗಳ ಆಯವ್ಯಯ ಮಂಡನೆಯ ಅನುಭವದೊಂದಿಗೆ ಗ್ಯಾರಂಟಿ ಯೋಜನೆಗಳು ಯಶಸ್ಸು ಕಂಡಿವೆ. ಸರ್ಕಾರವು ಸದಾ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸದಲ್ಲಿ ನಿರತವಾಗಿದೆ. ಆದರೆ, ಅದನ್ನು ಪ್ರಚಾರ ಮಾಡುವ ಕೆಲಸದಲ್ಲಿ ಹಿಂದುಳಿದಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದಾಗ ರಾಜ್ಯ ಬರಗಾಲ ಪೀಡಿತವಾಗುತ್ತದೆ ಎಂದು ವಿಪಕ್ಷಗಳು ಟೀಕಿಸಿದ್ದವು. ಆದರೆ, ಇದೇ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ೯೩ ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್ ಮಾಹೆಯಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ, ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದರು.

ಕೃಷಿ ಪ್ರಧಾನ ಜಿಲ್ಲೆಯಾದ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವ ವಿದ್ಯಾನಿಲಯವನ್ನು ಸರ್ಕಾರ ನೀಡಿದೆ ಹಾಗೂ ಆದಿಚುಂಚನಗಿರಿಯಲ್ಲಿ ಖಾಸಗಿ ಕೃಷಿ ಕಾಲೇಜು ಪ್ರರಂಭಿಸಲು ಅನುಮತಿ ನೀಡಲಾಗಿದೆ ಎಂದರು.

ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, ಈ ದಿನ ರಾಜ್ಯದ ಇತಿಹಾಸದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ದಿನವಾಗಿದೆ. ಇದೇ ಮೊದಲ ಬಾರಿಗೆ ಜೂನ್ ಮಾಹೆಯಲ್ಲಿ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ್ದಾರೆ. ಈ ಬಾರಿ ಮೆಟ್ಟೂರು ಅಣೆಕಟ್ಟು ಸಹ ಭರ್ತಿಯಾಗುವುದರಿಂದ ಬಹಳಷ್ಟು ಸಮಸ್ಯೆಗಳು ಪರಿಹಾರವಾಗಿದೆ ಎಂದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ಕೆಲಸಗಳ ಅಭಿವೃದ್ಧಿಗೆ ೧೫೦ ಕೋಟಿ ರು. ಮಂಜೂರಾತಿ ನೀಡಲಾಗಿದೆ. ಆರ್ಥಿಕ ಇಲಾಖೆಯಲ್ಲೂ ಮಂಜೂರಾತಿ ಕೊಡಿಸಿಕೊಡಬೇಕಾಗಿ ಕೋರಿದರು.

ಜಿಲ್ಲೆಯಲ್ಲಿ ಸಿಡಿಎಸ್, ರಾಮಸ್ವಾಮಿ ಹಾಗೂ ಇತರೆ ನಾಲೆಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಇದಕ್ಕೆ ಹೊಂದಿಕೊಂಡಿರುವ ಉಪನಾಲೆಗಳನ್ನು ಅಭಿವೃದ್ಧಿಪಡಿಸುವಂತೆ ಮನವಿ ಸಲ್ಲಿಸಿದರು.

PREV
Read more Articles on

Recommended Stories

ಎಸ್‌ಟಿ ತಟ್ಟೆಗೆ ಕುರುಬರ ಕೈ : ವಿ.ಎಸ್‌.ಉಗ್ರಪ್ಪ ಆಕ್ಷೇಪ
ನಾಯಕತ್ವ ಬದಲು ಗೊಂದಲಕ್ಕೆ ವರಿಷ್ಠರು ಬ್ರೇಕ್‌ ಒತ್ತಲಿ : ಸತೀಶ್‌