ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧೆ
ಚಿಕ್ಕಬಳ್ಳಾಪುರದ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗೆ ಭಾರಿ ಪೈಪೋಟಿ ಏರ್ಪಟ್ಟಿದೆ. ಎನ್‌ಡಿಎ ಅಂಗಪಕ್ಷ ಜೆಡಿಎಸ್‌ಗೆ ಈ ಕ್ಷೇತ್ರ ಹಂಚಿಕೆಯಾಗುವ ಸಾಧ್ಯತೆ ಕಡಿಮೆ, ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆಯೇ ಇಲ್ಲಿ ಹೋರಾಟ ನಡೆಯಲಿದೆ. ಬಿಜೆಪಿಯ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಗಳಾಗಿರುವ ಮಾಜಿ ಸಚಿವ ಡಾ.ಕೆ. ಸುಧಾಕರ್ ಮತ್ತು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ನಡುವೆ ಪೈಪೋಟಿ ನಡೆದಿದೆ. ಎಐವೈಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ, ಮಾಜಿ ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಮತ್ತು ಮಾಜಿ ಸಚಿವ ಎನ್.ಹೆಚ್ .ಶಿವಶಂಕರರೆಡ್ಡಿ ಕಾಂಗ್ರೆಸ್ ನ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಆದರೂ ಕಾಂಗ್ರೆಸ್‌ನಲ್ಲಿ ಒಂದು ರೀತಿ ಸೆಟ್ಲ್ ಆದಂತಿದೆ. ಈ ಭಾಗದಲ್ಲಿ ಜೆಡಿಎಸ್ ಮತಗಳಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಬೆಂಬಲದ ನಿರೀಕ್ಷೆ ಸಹಜ.ಮಾಜಿ ಸಚಿವ ಡಾ.ಸುಧಾಕರ್ ಆಕಾಂಕ್ಷಿಮಾಜಿ ಸಚಿವ ಡಾ.ಕೆ.ಸುಧಾಕರ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. 2013, 2018 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಶಾಸಕರಾಗಿ 2019ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಂದು ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರಲ್ಲಿ ಇವರು ಪ್ರಮುಖರು. ಬಳಿಕ 2019ರ ಉಪ ಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಭಾವ ಬೆಳೆಸಿಕೊಂಡಿದ್ದರು. ಹೈಕಮಾಂಡ್‌ಗೂ ನಿಕಟವರ್ತಿಯಾಗಿದ್ದರು. ರಾಜ್ಯದ ಕೋವಿಡ್ ನಿರ್ವಹಣೆ ಬಗ್ಗೆ ಕೇಂದ್ರ ಮೆಚ್ಚುಗೆ ವ್ಯಕ್ತಪಡಿಸಿತ್ತು.ತಮ್ಮ ಅಧಿಕಾರಾವಧಿಯಲ್ಲಿ ಜಿಲ್ಲೆಯಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಅಭಿವೃದ್ಧಿ ಯೋಜನೆ ಕೊಂಡೊಯ್ಯಲಾಗಿತ್ತು ಎನ್ನುವುದು ಡಾ ಕೆ ಸುಧಾಕರ್ ವಿಶ್ವಾಸ. ಹಾಗಿದ್ದರೂ ಕಾಂಗ್ರೆಸ್‌ನ ವಿಶೇಷ ರಣತಂತ್ರ ಸುಧಾಕರ್ ಅವರನ್ನು ವಿಧಾನಸಭೆ ಚುನಾವಣೆಯಲ್ಲಿ ಮಣಿಸಿತ್ತು. ಶಾಸಕ ವಿಶ್ವನಾಥ್ ಅಡ್ಡಿ ಲೋಕಸಭೆ ಚುನಾವಣೆ ಟಿಕೆಟ್‌ಗೆ ಡಾ.ಕೆ. ಸುಧಾಕರ್ ಬೇಡಿಕೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಯಡಿಯೂರಪ್ಪ ಮತ್ತು ವಿಜಯೇಂದ್ರಗೆ ಆಪ್ತರಾಗಿರುವ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಪುತ್ರ ಅಲೋಕ್ ಕೂಡ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿ. ಪುತ್ರನಿಗೆ ಟಿಕೆಟ್ ಕೊಡಿಸಲು ವಿಶ್ವನಾಥ್ ಎಲ್ಲ ರೀತಿಯ ಶ್ರಮ ಹಾಕುತ್ತಿದ್ದಾರೆ. ತಮಗೆ ಅವಕಾಶ ನೀಡಿದರೆ ಈ ಭಾಗದ 2 ರಿಂದ 3 ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆಗೆ ಅನುಕೂಲವೆಂದು ಹೇಳುತ್ತಿದ್ದಾರೆ. ಹಾಗಾಗಿ ಹೈಕಮಾಂಡ್ ನಿರ್ಧಾರದ ಬಗ್ಗೆ ತೀವ್ರ ಕುತೂಹಲವಿದೆ.ರಕ್ಷಾ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ