ಡಿ.ಕೆ.ಶಿವಕುಮಾರ್‌ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಮೊದಲು ನೆಟ್ಟಗೆ ಬದುಕು, ನನ್ನ ಕೆಣಕಬೇಡ: ಎಚ್‌ಡಿಕೆ

Published : Aug 10, 2024, 05:19 AM IST
HDK

ಸಾರಾಂಶ

ಡಿ.ಕೆ.ಶಿವಕುಮಾರ್‌ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ? ಅವರು ಮನುಷ್ಯನಾ? ನನ್ನನ್ನು ಅವರು ಪ್ರಶ್ನೆ ಮಾಡುತ್ತಾರೆ. ಆದರೆ ನಿಮ್ಮ ಯೋಗ್ಯತೆ, ಹಣೆಬರಹ ನನಗೆ ಬಹಳ ಚೆನ್ನಾಗಿ ಗೊತ್ತಿದೆ.

ನವದೆಹಲಿ: ‘ಡಿ.ಕೆ.ಶಿವಕುಮಾರ್‌ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ? ಅವರು ಮನುಷ್ಯನಾ? ನನ್ನನ್ನು ಅವರು ಪ್ರಶ್ನೆ ಮಾಡುತ್ತಾರೆ. ಆದರೆ ನಿಮ್ಮ ಯೋಗ್ಯತೆ, ಹಣೆಬರಹ ನನಗೆ ಬಹಳ ಚೆನ್ನಾಗಿ ಗೊತ್ತಿದೆ. 

ನಿಮ್ಮ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ಬದುಕಲು ಕಷ್ಟವಾಗುತ್ತದೆ. ಮೊದಲು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಡಿಸಿಎಂ ವಾಕ್ಪ್ರಹಾರ

‘ಮಿಸ್ಟರ್ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆಯಲ್ಲಿ ಕೇವಲ 19 ಸೀಟು ಗೆದ್ದ ನಿನಗೆ 136 ಸ್ಥಾನ ಗೆದ್ದು ಜನಾಶೀರ್ವಾದದಿಂದ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರ ರಾಜೀನಾಮೆ ಬೇಕಾ? ಈ ಕನಕಪುರ ಬಂಡೆ ಸಿದ್ದರಾಮಯ್ಯ ಹಿಂದೆ ಇದೆ. ಈ ಬಂಡೆ ಹಿಂದಿನ 136 ಶಾಸಕರೂ ಸಿದ್ದರಾಮಯ್ಯ ಹಿಂದೆ ಇದ್ದಾರೆ. ಹತ್ತು ತಿಂಗಳಲ್ಲ ಹತ್ತು ವರ್ಷವಾದರೂ ನಿಮಗೆ ಈ ಸರ್ಕಾರ ಮುಟ್ಟಲಾಗಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಎಸೆದಿದ್ದಾರೆ.

ಇದೇ ವೇಳೆ, ‘ಮಿಸ್ಟರ್ ಕ್ಲೀನ್ ಸ್ವಾಮಿ (ಕುಮಾರಸ್ವಾಮಿ) ವಿರುದ್ಧ 50 ಡಿನೋಟಿಫಿಕೇಷನ್ ಪ್ರಕರಣ ಇರುವುದು ಗೊತ್ತಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರಾಜ್ಯಪಾಲರ ಮುಂದೆ ಲೋಕಾಯುಕ್ತ ಪೊಲೀಸರ ಪ್ರಾಸಿಕ್ಯೂಷನ್ ಅರ್ಜಿಯೂ ಬಾಕಿಯಿದೆ. ಎಲ್ಲಾ ಹಗರಣಗಳನ್ನೂ ಬಿಚ್ಚಿಡುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಜನಾಂದೋಲನ ಸಮಾವೇಶದ ಉದ್ದಕ್ಕೂ ಜೆಡಿಎಸ್-ಬಿಜೆಪಿ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

‘ಹೇಯ್ ವಿಜಯೇಂದ್ರ, ಹೇಯ್ ಅಶೋಕ, ಕುಮಾರಸ್ವಾಮಿ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? 19 ಸ್ಥಾನ ಗೆದ್ದ ನಿನಗೆ ರಾಜೀನಾಮೆ ಕೇಳುವ ನೈತಿಕತೆ ಇದೆಯಾ? ಮಾಧ್ಯಮಗಳು ನನ್ನನ್ನು ಬಂಡೆ ಎಂದರು. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಬಂಡೆ ಸಿದ್ದರಾಮಯ್ಯನ ಜತೆ ಇದೆ. ಈ ಬಂಡೆ ಜತೆಗೆ 135 ಶಾಸಕರೂ ಸಿದ್ದರಾಮಯ್ಯ ಹಿಂದೆ ಇದ್ದಾರೆ. ಕೋಟ್ಯಂತರ ಜನ ಸಿದ್ದರಾಮಯ್ಯನವರ ಬೆನ್ನಿಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಳ್ಳಿ’ ಎಂದು ತಿರುಗೇಟು ನೀಡಿದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ