;Resize=(412,232))
ತುಮಕೂರು: ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರುವುದು ಅಥವಾ ಕೇಂದ್ರದಲ್ಲಿ ಇರುವುದು ಅವರಿಗೆ ಬಿಟ್ಟ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿದ್ದವರು. ಇವತ್ತು ಕೇಂದ್ರ ಸಚಿವರಾಗಿದ್ದಾರೆ. ಅವರು ರಾಜ್ಯ ಬಿಟ್ಟು ಕೇಂದ್ರಕ್ಕೆ ಹೋದಾಗಲೂ ಯಾರ ಪರ್ಮಿಷನ್ ತೆಗೆದುಕೊಂಡಿಲ್ಲ, ಹಾಗೆಯೇ ಅವರು ಕೇಂದ್ರ ಬಿಟ್ಟು ಇಲ್ಲಿಗೆ ಬರಲು ಯಾರ ಪರ್ಮಿಷನ್ ತೆಗೆದುಕೊಳ್ಳಬೇಕಿಲ್ಲ ಎಂದರು. ಕುಮಾರಸ್ವಾಮಿ ಅನುಭವಿ ರಾಜಕಾರಣಿ. ಅವರು ಕರ್ನಾಟಕಕ್ಕೆ ಬಂದು ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದರೆ ಒಳ್ಳೆಯದಲ್ಲವೇ ಎಂದು ಹೇಳಿದರು.
ಪ್ರಯತ್ನ ಫಲಿಸುತ್ತೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್ ಈ ಬಗ್ಗೆ ಅವರನ್ನೇ ಕೇಳಬೇಕು. ಅವರ ಹೇಳಿಕೆಗೆ ನನ್ನ ಪ್ರತಿಕ್ರಿಯೆ ಇಲ್ಲ. ನನ್ನ ಪ್ರತಿಕ್ರಿಯೆ ಅವಶ್ಯಕತೆಯಿಲ್ಲ ಎಂದರು.