ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿ-ದಾಖಲೆ ಸಲ್ಲಿಕೆ : ಕೃಷ್ಣ ಭೈರೇಗೌಡ

KannadaprabhaNewsNetwork |  
Published : Aug 16, 2024, 12:54 AM ISTUpdated : Aug 16, 2024, 04:34 AM IST
ಬಳ್ಳಾರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇಲಾಖೆಯ ಪ್ರಮುಖ ಯೋಜನೆಗಳ ಜಾರಿ ಕುರಿತು ಮಾಹಿತಿ ನೀಡಿದರು.  | Kannada Prabha

ಸಾರಾಂಶ

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿಯಾಗಿರುವ ಕುರಿತು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಹೈಕೋರ್ಟ್‌ ನಲ್ಲಿ ದಾವೆ ಹೂಡಿದ್ದಾರೆ. 

 ಬಳ್ಳಾರಿ :  ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿಯಾಗಿರುವ ಕುರಿತು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಹೈಕೋರ್ಟ್‌ ನಲ್ಲಿ ದಾವೆ ಹೂಡಿದ್ದಾರೆ. ಹೈಕೋರ್ಟ್‌ಗೆ ಸರ್ಕಾರದಿಂದ ಈ ಬಗ್ಗೆ ಅಗತ್ಯ ದಾಖಲೆಗಳನ್ನು ಒದಗಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವ ಸಮಾರಂಭದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಲ್ಯಾಂಡ್‌ಬೀಟ್‌ ಯೋಜನೆ ಮೂಲಕ ಸರ್ಕಾರಿ ಜಮೀನುಗಳ ಒತ್ತುವರಿಯನ್ನು ಗುರುತಿಸಲು ಕಂದಾಯ ಇಲಾಖೆ ಕ್ರಮ ವಹಿಸಿದೆ. ಈ ಸಂಬಂಧ ಗ್ರಾಮವಾರು ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಾಜ್ಯದಲ್ಲಿ 4.32 ಲಕ್ಷ ಎಕರೆ ಸರ್ಕಾರಿ ಜಾಗ ಒತ್ತುವರಿಯಾಗಿರುವ ಶಂಕೆ ಇದ್ದು, ಇವುಗಳ ಸ್ಥಳ ಪರಿಶೀಲನೆಗೆ ಸೂಚಿಸಲಾಗಿದೆ. ಈಗಾಗಲೇ 13.04 ಲಕ್ಷ ಎಕರೆ ಜಮೀನುಗಳಿಗೆ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಪೈಕಿ 91 ಸಾವಿರ ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿರುವುದು "ಲ್ಯಾಂಡ್ ಬೀಟ್ " ಮೊಬೈಲ್ ತಂತ್ರಾಂಶದ ಮೂಲಕ ತಿಳಿದು ಬಂದಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಜಮೀನುಗಳನ್ನು ಸರ್ವೆ ವ್ಯಾಪ್ತಿಗೆ ತರಲಾಗುವುದು. ಲ್ಯಾಂಟ್‌ಬೀಟ್ ಯೋಜನೆ ಅನುಷ್ಠಾನದಿಂದ ಸರ್ಕಾರಿ ಜಮೀನು ಒತ್ತುವರಿಯಾಗದಂತೆ ಶಾಶ್ವತವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಖಾಲಿ ಇರುವ 750 ಸರ್ವೇಯರ್ ನೇಮಕಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಎಡಿಎಲ್‌ಆರ್, ಸರ್ವೇಯರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಸಚಿವರು ತಿಳಿಸಿದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ ಸಚಿವರು, ರಾಜ್ಯಕ್ಕೆ ಅನುದಾನ ನೀಡುವಂತೆ ಕೋರಲು ದೆಹಲಿಗೆ ತೆರಳಿ ಕೇಂದ್ರ ನಾಯಕರಿಗೆ ಹೂವಿನಹಾರ, ಶಾಲು ಹಾಕಿ, ಟೋಪಿ ಇಟ್ಟು, ಕೈ ಮುಗಿದರೂ ಅವರ ಮನಸ್ಸು ಕರಗಲಿಲ್ಲ. ನಾವು ಕೊಟ್ಟ ಮನವಿಯನ್ನು ಕಸದ ಬುಟ್ಟಿಗೆ ಎಸೆದರು ಎಂದು ಆರೋಪಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ರಾಜ್ಯದಲ್ಲಿ ಇ-ವಾಹನ ಕ್ಷೇತ್ರ ಅಭಿವೃದ್ಧಿಗೆ ಒತ್ತು : ಎಚ್‌.ಡಿ. ಕುಮಾರಸ್ವಾಮಿ