;Resize=(412,232))
ಬೆಂಗಳೂರು : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಲಿನಿಂದ ನೋವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆಯಲ್ಲಿ ಗೆಲ್ಲುವ ವಿಶ್ವಾಸವಿತ್ತು. ಕೊನೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದೆ. ಈ ಸೋಲಿನಿಂದ ನೋವಾಗಿದೆ. ಮುಂದಿನ ದಿನಗಳಲ್ಲಿ ಕೊರತೆಗಳನ್ನು ಸರಿಪಡಿಸಿಕೊಂಡು ಗೆಲ್ಲಲು ಪ್ರಯತ್ನಿಸುತ್ತೇವೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಉಚಿತ ಘೋಷಣೆಗಳಿಂದ ಜನರನ್ನು ಹೆಚ್ಚು ದಿನ ಮರುಳು ಮಾಡಲು ಆಗಲ್ಲ ಎಂಬುದು ಈ ಪಂಚ ರಾಜ್ಯಗಳ ಫಲಿತಾಂಶ ತೋರಿಸಿದೆ. ಪಂಚ ರಾಜ್ಯಗಳ ಫಲಿತಾಂಶವು ಜನ ಪ್ರಧಾನಿ ಮೋದಿ ಅವರ ಮೇಲಿರಿಸಿರುವ ನಂಬಿಕೆಯನ್ನು ಮತ್ತಷ್ಟು ದೃಢಪಡಿಸಿದೆ. ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ಧೂಳಿಪಟವಾಗಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಪ್ರಭಾವದಿಂದ ಗೆದ್ದಿದ್ದೇವೆ. ಇದು ದೇಶಕ್ಕೇ ಉದಾಹರಣೆಯಾಗಿದೆ. ಒಂದು ಸೀಟು ಗೆಲ್ಲಲಾಗದ ಕಾಂಗ್ರೆಸ್‌ಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ. ಕಾಂಗ್ರೆಸಿಗರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಟೀಕಿಸಿದರು.