ನಾನು ನಿರಪರಾಧಿ, ಆದರೂ ನನ್ಮೇಲೆ ಅಪಪ್ರಚಾರ: ಸಿದ್ದು

Published : Oct 14, 2026, 05:14 AM IST
Former CM Siddaramaiah on Sting Operation

ಸಾರಾಂಶ

ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ. ಹೀಗಿದ್ದರೂ ನನ್ನ ಹೆಸರು ಜೋಡಿಸಿ ಅಪಪ್ರಚಾರ ನಡೆಸುತ್ತಿರುವುದು ರಾಜಕೀಯ ದುರುದ್ದೇಶ

ಬೆಂಗಳೂರು : ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ. ಹೀಗಿದ್ದರೂ ನನ್ನ ಹೆಸರು ಜೋಡಿಸಿ ಅಪಪ್ರಚಾರ ನಡೆಸುತ್ತಿರುವುದು ರಾಜಕೀಯ ದುರುದ್ದೇಶ ಹಾಗೂ ನನ್ನ ಚಾರಿತ್ರ್ಯಹನನದ ಪ್ರಯತ್ನ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿಷ್ಪಕ್ಷಪಾತ ತನಿಖೆ ನಡೆಸುವಂತೆ ದೂರು

ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ತನಿಖೆಯಿಂದ ಸತ್ಯ ಹೊರಬರಲಿದೆ. ಅಲ್ಲಿಯವರೆಗೆ ಮಾಧ್ಯಮಗಳು ಮಾತ್ರವಲ್ಲ, ಸಾರ್ವಜನಿಕರೂ ಅನಗತ್ಯವಾಗಿ ಇಂಥ ಸುಳ್ಳು ಸುದ್ದಿ ಪ್ರಚಾರ ಮಾಡದೆ ಸತ್ಯದ ಪರ ನಿಲ್ಲಬೇಕು ಎಂದು ಕೋರಿದ್ದಾರೆ.

ನನ್ನ ಆತ್ಮಸಾಕ್ಷಿಗೆ ತಿಳಿದಿದೆ:

ಅಧಿಕೃತ ಸಾಮಾಜಿಕ ಜಾಲತಾಣ ಮೂಲಕ ಸ್ಪಷ್ಟನೆ ನೀಡಿರುವ ಅವರು, ‘ನಾನು ಸಂಪೂರ್ಣ ನಿರಪರಾಧಿ ಎನ್ನುವುದು ನನ್ನ ಆತ್ಮಸಾಕ್ಷಿಗೆ ತಿಳಿದಿದೆ. ಆಧುನಿಕ ತಂತ್ರಜ್ಞಾನ ಯುಗದಲ್ಲಿ ಸುಳ್ಳನ್ನು ಸತ್ಯವಾಗಿ ಬಿಂಬಿಸುವುದು ಸುಲಭದ ಕೆಲಸ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾನು ನ್ಯಾಯಾಲಯದ ಮೆಟ್ಟಿಲು ಏರಿದ್ದೇನೆಯೇ ಹೊರತು ಉಳಿದಂತೆ ಯಾವ ಭಯವೂ ನನಗಿಲ್ಲ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎನ್ನುವ ವಿಶ್ವಾಸವೂ ನನಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ಇರುವವನು. ಇಲ್ಲಿಯವರೆಗಿನ ನನ್ನ ರಾಜಕೀಯ ಜೀವನದಲ್ಲಿ ನಾನೆಂದೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸಿದವನಲ್ಲ. ಆದರೆ ಕೆಲ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ ಅಥವಾ ಪ್ರಸಾರಕ್ಕೆ ತಡೆಯಾಜ್ಞೆ ತರಬೇಕಾದ ಪ್ರಸಂಗ ಬಂದಿದೆ. ಈ ಬಗ್ಗೆ ನನಗೆ ವಿಷಾದವಿದೆ ಎಂದು ಹೇಳಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಅಮಿತ್‌ ಶಾಗೆ ಸ್ಟಿಂಗ್‌ ಬಗ್ಗೆ ಶೀಘ್ರವೇ ದೂರು - 14 ವರ್ಷದ ಬಾಲಕಿ ಬಗ್ಗೆ ಮಾಹಿತಿ: ಎಚ್‌ಡಿಕೆ
ತನಿಖೆ ಆಗಲಿ, ದಾಖಲೆಗಳ ಕೊಡುವೆ : ಎಚ್‌ಡಿಕೆಗೆ ಡಿಕೆ