ಶಿಗ್ಗಾವಿಗೆ ನಾನು ಅಭ್ಯರ್ಥಿಯಲ್ಲ - ಟಿಕೆಟ್‌ಗಾಗಿ ಭರತ್ ಬೊಮ್ಮಾಯಿ ಅರ್ಜಿ: ಮುರುಗೇಶ್ ನಿರಾಣಿ ಸ್ಪಷ್ಟನೆ

Published : Oct 18, 2024, 11:34 AM IST
Murugesh nirani

ಸಾರಾಂಶ

ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುಣಾವಣೆ ನಡೆಯುತ್ತಿದ್ದು, ಶಿಗ್ಗಾವಿ ಕ್ಷೇತ್ರಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಹೆಸರು ಕೇಳಿ ಬರುತ್ತಿರುವುದರ ಬೆನ್ನಲ್ಲೇ ಸ್ವತಃ ನಿರಾಣಿ ಅವರೇ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನವದೆಹಲಿ  : ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುಣಾವಣೆ ನಡೆಯುತ್ತಿದ್ದು, ಶಿಗ್ಗಾವಿ ಕ್ಷೇತ್ರಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಹೆಸರು ಕೇಳಿ ಬರುತ್ತಿರುವುದರ ಬೆನ್ನಲ್ಲೇ ಸ್ವತಃ ನಿರಾಣಿ ಅವರೇ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿ ಅವರು, ಶಿಗ್ಗಾವಿ ಕ್ಷೇತ್ರ ಸೇರಿ 3 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರಲ್ಲಿ ಶಿಗ್ಗಾವಿ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿ ಬರುತ್ತಿದ್ದು, ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿ ಅಲ್ಲ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಸೇರಿ 60 ಮಂದಿ ಟಿಕೆಟ್‌ಗಾಗಿ ಅರ್ಜಿ ಹಾಕಿದ್ದಾರೆ ಎಂದು ತಿಳಿಸಿದರು.

ನಾನು ಮತ್ತೊಂದು ಜಿಲ್ಲೆಗೆ ಹೋಗಿ ಸ್ಪರ್ಧೆ ಮಾಡೋದು ಸರಿಯಲ್ಲ. ಆ ಕ್ಷೇತ್ರದಲ್ಲೂ ಪಂಚಮಸಾಲಿ ಸಮಾಜದವರು ಹೆಚ್ಚಿದ್ದು, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಪಕ್ಷದ ಟಿಕೆಟ್ ಕೊಡಬೇಕು. ಅಂತಿಮವಾಗಿ ಶಿಗ್ಗಾವಿಯಲ್ಲಿ ಬಿಜೆಪಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ತಮ್ಮ ಸ್ಪರ್ಧೆಯ ಕುರಿತು ಹರಿದಾಡಿದ ಸುದ್ದಿಗಳನ್ನು ನಿರಾಣಿ ಅಲ್ಲಗಳೆದಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಗೃಹಲಕ್ಷ್ಮಿ ಸ್ಕೀಂ ₹5000 ಕೋಟಿ ಹಗರಣ: ಬಿಜೆಪಿ
ಬೆಳಗಾವಿ ಸದನದಲ್ಲೂ ಸಿಎಂ ಕುರ್ಚಿಯ ಕದನ!