ನನಗೇ ಮತ್ತೆ ರಾಜ್ಯಾಧ್ಯಕ್ಷ ಪಟ್ಟ : ಶೀಘ್ರದಲ್ಲೇ ಉತ್ತಮ ತೀರ್ಮಾನ - ವಿಜಯೇಂದ್ರ ವಿಶ್ವಾಸ

Published : Jan 19, 2025, 07:32 AM IST
by vijayendra

ಸಾರಾಂಶ

ನನ್ನ ಒಂದು ವರ್ಷದ ಪರಿಶ್ರಮದ ಪರಿಣಾಮವಾಗಿ ವರಿಷ್ಠರು ನನ್ನನ್ನೇ ರಾಜ್ಯಾಧ್ಯಕ್ಷನನ್ನಾಗಿ ಮುಂದುವರೆಸುತ್ತಾರೆ ಎನ್ನುವ ದೃಢ ವಿಶ್ವಾಸ ಇದೆ ಎಂದು ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು: ನನ್ನ ಒಂದು ವರ್ಷದ ಪರಿಶ್ರಮದ ಪರಿಣಾಮವಾಗಿ ವರಿಷ್ಠರು ನನ್ನನ್ನೇ ರಾಜ್ಯಾಧ್ಯಕ್ಷನನ್ನಾಗಿ ಮುಂದುವರೆಸುತ್ತಾರೆ ಎನ್ನುವ ದೃಢ ವಿಶ್ವಾಸ ಇದೆ ಎಂದು ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕರನ್ನಾಗಿ ಯಾರನ್ನು ಮಾಡಬೇಕೆಂಬುದರ ಕುರಿತು ರಾಜ್ಯಾಧ್ಯಕ್ಷ ಚುನಾವಣೆಯ ಉಸ್ತುವಾರಿ ಆಗಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಎಲ್ಲ ಹಿರಿಯರ ಜತೆ ಚರ್ಚಿಸಲಿದ್ದಾರೆ. ಅತಿ ಶೀಘ್ರದಲ್ಲೇ ಉತ್ತಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ನಮ್ಮದು ಆಂತರಿಕ ಪ್ರಜಾಪ್ರಭುತ್ತ ವ್ಯವಸ್ಥೆಯಿರುವ ಪಕ್ಷ. ನನ್ನನ್ನು ಪಕ್ಷದ ಹಿರಿಯರು, ವರಿಷ್ಠರು ರಾಜ್ಯಾಧ್ಯಕ್ಷರಾಗಿ ಮಾಡಿದ್ದರು. ನಾನು ಆಗಿನಿಂದಲೂ ಸರ್ಕಾರದ ವಿರುದ್ಧ ಸತತ ಹೋರಾಟ ಮಾಡುತ್ತಿದ್ದೇನೆ. ನನ್ನ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡುತ್ತಿರುವ ಬಗ್ಗೆ ಕಾರ್ಯಕರ್ತರಲ್ಲಿ ಸಮಾಧಾನ ಇದೆ ಎಂದರು.

ಇನ್ನು ತಮ್ಮ ಬಗ್ಗೆ ಅಪಸ್ವರ ಎತ್ತುತ್ತಿರುವವರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಕೆಲ ಹಿರಿಯ ಮುಖಂಡರು ಅಲ್ಲೊಂದು. ಇಲ್ಲೊಂದು ಹೇಳಿಕೆ ಕೊಡುತ್ತಿದ್ದಾರೆ. ಇದನ್ನು ನಾನು ಇಲ್ಲ ಅಂತ ಹೇಳುವುದಿಲ್ಲ ಎಂದು ತಿಳಿಸಿದರು.

ಅಧ್ಯಕ್ಷ ಚುನಾವಣೆ ಪ್ರಕ್ರಿಯೆ ಶೀಘ್ರ ಶುರು: ಚೌಹಾಣ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ನಾನ ಚುನಾವಣಾ ಪ್ರಕ್ರಿಯೆಗಳು ಶೀಘ್ರದಲ್ಲೇ ಆರಂಭವಾಗಲಿವೆ ಎಂದು ಕೇಂದ್ರ ಕೃಷಿ ಸಚಿವ ಹಾಗೂ ಚುನಾವಣೆ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವುದೇ ಗೊಂದಲ ಇಲ್ಲ ಎಲ್ಲರೂ ಚರ್ಚಿಸಿಯೇ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಬೂತ್ ಸಮಿತಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸಾನದವರೆಗೂ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ