;Resize=(412,232))
ಬೆಂಗಳೂರು : ನಾನು ಖಾತೆ ಬದಲಿಸಿ ಎಂದು ಯಾರನ್ನೂ ಕೇಳಿಲ್ಲ. ಕೆಲ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿ. ನಾನು ಯಾವತ್ತೂ ಇಂಥದ್ದೇ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆರ್‌ಸಿಬಿ ಗೆಲುವಿನ ವಿಜಯೋತ್ಸವ ವೇಳೆ ಸಾವು ಸಂಭವಿಸಿದ್ದು ದುರಂತ. ಕಾಲ್ತುಳಿತ ಘಟನೆ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಪ್ರಕರಣವನ್ನು ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ.ಕುನ್ಹಾ ಅವರ ಏಕವ್ಯಕ್ತಿ ಆಯೋಗಕ್ಕೆ ವಹಿಸಿದ್ದೇವೆ. ಅವರು ತನಿಖೆ ಮಾಡಿ ವರದಿ ಕೊಡುತ್ತಾರೆ. ನಾವು ಹೇಳಿಕೆ ಕೊಟ್ಟರೆ ಬೇರೆ ರೀತಿಯ ಪರಿಣಾಮ ಬೀರುತ್ತದೆ ಎಂದರು.