ಕೋರ್‌ ಕಮಿಟಿಯ ಶೇ.80ರಷ್ಟು ಬೆಂಬಲ ನನಗಿದೆ: ಅಧ್ಯಕ್ಷರಾಗಿ ನನ್ನನ್ನೇ ಮುಂದುವರೆಯಲು ಕೋರಿಕೆ - ವಿಜಯೇಂದ್ರ

Published : Jan 24, 2025, 08:05 AM IST
BY vijayendraa

ಸಾರಾಂಶ

ಅಧ್ಯಕ್ಷ ಹುದ್ದೆಯ ಬದಲಾವಣೆ ಕುರಿತು ಭಾರೀ ಗದ್ದಲ ನಡೆದಿರುವ ನಡುವೆಯೇ, ಇತ್ತೀಚೆಗೆ ನಡೆದ ಬಿಜೆಪಿ ಕೋರ್‌ಕಮಿಟಿ ಸಭೆಯಲ್ಲಿದ್ದ ಶೇ.80ರಷ್ಟು ಸದಸ್ಯರು ನನ್ನನ್ನೇ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಸುವ ಬಗ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

 ಶಿವಮೊಗ್ಗ : ಅಧ್ಯಕ್ಷ ಹುದ್ದೆಯ ಬದಲಾವಣೆ ಕುರಿತು ಭಾರೀ ಗದ್ದಲ ನಡೆದಿರುವ ನಡುವೆಯೇ, ಇತ್ತೀಚೆಗೆ ನಡೆದ ಬಿಜೆಪಿ ಕೋರ್‌ಕಮಿಟಿ ಸಭೆಯಲ್ಲಿದ್ದ ಶೇ.80ರಷ್ಟು ಸದಸ್ಯರು ನನ್ನನ್ನೇ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಸುವ ಬಗ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ‘ಬೆಂಗಳೂರಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದ ಶೇ. 80ರಷ್ಟು ನಾಯಕರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನನ್ನೇ ಮುಂದುವರಿಸಲು ಕೋರಿದ್ದಾರೆ. ಕೇವಲ ಐದಾರು ಜನ ಮಾತ್ರ ನನ್ನ ವಿರುದ್ಧ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ನಡೆಯುತ್ತಿರುವ ಎಲ್ಲಾ ಗೊಂದಲಗಳಿಗೆ ಸದ್ಯದಲ್ಲೇ ಉತ್ತರ ಸಿಗಲಿದೆ’ ಎಂದು ಹೇಳಿದ್ದಾರೆ.

ಬೇಸರ ನಿಜ:

ಬಿಜೆಪಿಯಲ್ಲಿನ ಬಣ ಬೆಳವಣಿಗೆಗಳು ಕಾರ್ಯಕರ್ತರು ಹಾಗೂ ನನಗೂ ಬೇಸರ ತರಿಸಿವೆ. ಆದರೆ ನನ್ನ ಅಧ್ಯಕ್ಷಗಿರಿಯ ಬಗ್ಗೆ ಕಾರ್ಯಕರ್ತರಿಗೆ ಸಮಾಧಾನ ಇದೆ. ಯಡಿಯೂರಪ್ಪನವರ ಬಗ್ಗೆ ಅಪಮಾನ ಆಗುವ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಇದರಿಂದ ಕಾರ್ಯಕರ್ತರು ನೊಂದಿದ್ದಾರೆ. ಈ ವಿಚಾರವಾಗಿ ನಾನು ಹೈಕಮಾಂಡ್ ಜೊತೆ ಮಾತಾಡಿದ್ದೇನೆ ಎಂದು ತಿಳಿಸಿದರು.

ಶ್ರೀರಾಮಲು ವಿಚಾರ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿದೆ. ಶ್ರೀರಾಮಲು ಬಗ್ಗೆ ನನಗೆ ಗೌರವ ಇದೆ. ಎಲ್ಲಾ ಅಂಶಗಳನ್ನು ಹೊರಗಡೆ ಹೇಳಲು ಸಾಧ್ಯವಿಲ್ಲ. ಶ್ರೀರಾಮುಲು ಅಪಾರ್ಥಕ್ಕೆ ಅವಕಾಶ ಮಾಡಿಕೊಡಬಾರದು. ಎಲ್ಲರೂ ಒಗ್ಗಟ್ಟಾಗಬೇಕು ಅಂತಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ತಿಳಿಸಿದ್ದಾರೆ. ಎಲ್ಲರೂ ಒಟ್ಟಾಗಿ ಹೋಗಬೇಕಿದೆ ಎಂದು ತಿಳಿಸಿದರು.

PREV

Recommended Stories

ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವೀಪಿ ಚುನಾವಣೆ ಅಡ್ಡ ಮತದಾನ : ಇಂಡಿಯಾ ಕೂಟದಲ್ಲಿ ಒಡಕು