ನಮಗೆ ಅವಕಾಶ ಕೊಡಲು ಬಿಜೆಪಿಗೆ ಹೇಳಿದ್ದೀನಿ : ಎಚ್ಡಿಕೆ

Published : Nov 17, 2026, 06:04 AM IST
HD Kumaraswamy

ಸಾರಾಂಶ

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಬಿಜೆಪಿಗೆ ಮನವಿ ಮಾಡಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕೊಲ್ಲೂರು : ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಬಿಜೆಪಿಗೆ ಮನವಿ ಮಾಡಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಕುಟುಂಬದೊಂದಿಗೆ ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವಚಂಡಿ ಯಾಗ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯೂರಿನಲ್ಲಿ ತಮ್ಮ ಅಭ್ಯರ್ಥಿ ಸ್ಪರ್ಧಿಸಬೇಕು ಎನ್ನುವ ಆಸೆ ಬಿಜೆಪಿಯದ್ದು. ಆದರೆ ಹಿಂದಿನಿಂದಲೂ ಹಿರಿಯೂರು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಹೋರಾಟದ ಕ್ಷೇತ್ರ ಎಂದು ಅವರು ತಿಳಿಸಿದರು.

2013ರಲ್ಲಿ ಜೆಡಿಎಸ್ ಅಭ್ಯರ್ಥಿ ಕೇವಲ 1200 ಮತಗಳ ಅಂತರದಲ್ಲಿ ಸೋತಿದ್ದರು

2013ರಲ್ಲಿ ಜೆಡಿಎಸ್ ಅಭ್ಯರ್ಥಿ ಕೇವಲ 1200 ಮತಗಳ ಅಂತರದಲ್ಲಿ ಸೋತಿದ್ದರು, 2018ರಲ್ಲಿ ಬಿಜೆಪಿ ಅಭ್ಯರ್ಥಿ ಅನುಕಂಪದ ಆಧಾರದಲ್ಲಿ ಜಯಗಳಿಸಿದ್ದರು. ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್‌ನ 40 ಸಾವಿರ ಮತಗಳಿವೆ. ಆದ್ದರಿಂದ ಜೆಡಿಎಸ್ ಅಭ್ಯರ್ಥಿ ಜಯಗಳಿಸುವ ಎಲ್ಲಾ ಸಾಧ್ಯತೆಗಳಿವೆ. ಆದರೆ ಅಲ್ಲಿ ನಮಗೆ ಯಾವುದೇ ಪ್ರತಿಷ್ಠೆಯ ಪ್ರಶ್ನೆ ಇಲ್ಲ, ನಾವು ತಾಳ್ಮೆಯಿಂದ ಇದ್ದೇವೆ, ತಾಳ್ಮೆಯಿಂದ ಇರುತ್ತೇವೆ, ಬಿಜೆಪಿ ಜೆಡಿಎಸ್ ಮೈತ್ರಿ ಮುಂದುವರಿಸಿಕೊಂಡು ಹೋಗುವುದಕ್ಕೆ ಆದ್ಯತೆ ನೀಡುತ್ತೇವೆ ಎಂದರು.

ರಾಹುಲ್‌ ಹೇಳಿಕೆಗೆ ಮಹತ್ವ ಬೇಕಾಗಿಲ್ಲ:

ದೇಶದಲ್ಲೀಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಜನರು ಗಂಭೀರವಾಗಿ ತೆಗೆದುಕೊಳ್ಳುವ ವಾತಾವರಣವಿಲ್ಲ. ಆದ್ದರಿಂದ ತಮ್ಮ ಫೋನ್ ಕದ್ದಾಲಿಸಲಾಗುತ್ತಿದೆ ಎಂಬ ಅವರ ಹೇಳಿಕೆಯನ್ನು ಯಾರೂ ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಹಿರಿಯೂರು 15 ವರ್ಷದ ಮತಗಳ ಬಗ್ಗೆ ಪರಿಶೀಲಿಸೋಣ : ಅಶೋಕ್‌
160 ವರ್ಷ ಹಳೆಯ ‘ಕುಮಾರಕೃಪ’ ಈಗ ಡಿಕೆ ಅಧಿಕೃತ ನಿವಾಸ