ಅಮಿತ್‌ ಶಾಗೆ ಎಲ್ಲಾ ಹೇಳಿದ್ದೀನಿ : ಬಿವೈವಿ - ಇದು ಪ್ರತಿಷ್ಠೆ ಅಲ್ಲ, ಗೆಲ್ಲಬೇಕೆಂಬ ಹಟ

Published : Nov 21, 2026, 09:05 AM IST
BY Vijayendra

ಸಾರಾಂಶ

‘ಹಿರಿಯೂರು ಉಪಚುನಾವಣೆ ಗೆಲ್ಲುವ ಹಠ ಇದೆ. ಟಿಕೆಟ್‌ಗಾಗಿ ಪ್ರತಿಷ್ಠೆ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಲ್ಲ ಮಾಹಿತಿ ನೀಡಿದ್ದೇನೆ. ನಾಲ್ಕು ಗೋಡೆಗಳ ನಡುವೆ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರು : ‘ಹಿರಿಯೂರು ಉಪಚುನಾವಣೆ ಗೆಲ್ಲುವ ಹಠ ಇದೆ. ಟಿಕೆಟ್‌ಗಾಗಿ ಪ್ರತಿಷ್ಠೆ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಲ್ಲ ಮಾಹಿತಿ ನೀಡಿದ್ದೇನೆ. ನಾಲ್ಕು ಗೋಡೆಗಳ ನಡುವೆ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ದುಷ್ಟ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಅವಕಾಶವಿದೆ

ಶುಕ್ರವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಿರಿಯೂರು ಉಪಚುನಾವಣೆಯಲ್ಲಿ ದುಷ್ಟ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಅವಕಾಶವಿದೆ. ಯಾವುದೇ ಗೊಂದಲವಿಲ್ಲದೆ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಜೆಡಿಎಸ್ ಟಿಕೆಟ್ ಬೇಡಿಕೆ ಸಹಜ. ಅಂತಿಮವಾಗಿ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಚುನಾವಣೆಯಲ್ಲಿ ಗೆಲ್ಲುವ ಹಠ ನಮಗಿದೆ

ಚುನಾವಣೆಯಲ್ಲಿ ಗೆಲ್ಲುವ ಹಠ ನಮಗಿದೆ. ಚುನಾವಣೆ ನಮಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಅಮಿತ್ ಶಾ ಅವರಿಗೆ ರಾಜ್ಯದ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಸೇರಿದಂತೆ ಎಲ್ಲ ಮಾಹಿತಿಯನ್ನು ನೀಡಿದ್ದೇನೆ. ನಾಲ್ಕು ಗೋಡೆಗಳ ನಡುವೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಅಮಿತ್ ಶಾ ಅವರೊಂದಿಗೆ ಸವಿಸ್ತಾರವಾಗಿ ಚರ್ಚೆ ನಡೆಸಿದ್ದೇನೆ. ಪರಿಷತ್ ಚುನಾವಣೆಯ ಫಲಿತಾಂಶ, ಹಿರಿಯೂರು ಕ್ಷೇತ್ರದ ರಾಜಕೀಯ ಬೆಳವಣಿಗೆಗಳು ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿಯೂ ಚರ್ಚಿಸಿದ್ದೇನೆ. ಭೇಟಿಯಲ್ಲಿ ಏನು ಚರ್ಚೆಯಾಗಿದೆ ಎಂಬುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಂದಿರುವುದು ನನ್ನ ವಿಶ್ವಾಸವನ್ನು ಹೆಚ್ಚಿಸಿದೆ. ಮುಂದೆ ನನಗೆ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಅಮಿತ್‌ ಕೈಗೆ ಹಿರಿಯೂರು ಗ್ರೌಂಡ್‌ರಿಪೋರ್ಟ್ : ಎಚ್ಡಿಕೆ
ಡಿ.1ರೊಳಗೆ ರೈತರ ಖಾತೆಗಳಿಗೆ ₹5000 ಬರ ಪರಿಹಾರ: ಪರಂ