ರಾಹುಲ್‌ ಗಾಂಧಿ ಹೇಳಿದ್ದಕ್ಕೆ ರಾಜೀನಾಮೆ ಕೊಟ್ಟೆ: ಸಿದ್ದು

Published : Sep 06, 2026, 11:54 AM IST
Siddaramaiah

ಸಾರಾಂಶ

ನೀವು ರಾಜೀನಾಮೆ ಕೇಳಿದರೆ ಕೊಡುತ್ತೇನೆ ಎಂದು ರಾಹುಲ್‌ ಗಾಂಧಿಗೆ ಮಾತು ಕೊಟ್ಟಿದ್ದೆ. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡು ಅಂದ್ರು, ಹಾಗಾಗಿ ಮುಖ್ಯಮಂತ್ರಿ ಹುದ್ದೆಯ ಪದತ್ಯಾಗ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೀರೂರು (ಚಿಕ್ಕಮಗಳೂರು) : ನೀವು ರಾಜೀನಾಮೆ ಕೇಳಿದರೆ ಕೊಡುತ್ತೇನೆ ಎಂದು ರಾಹುಲ್‌ ಗಾಂಧಿಗೆ ಮಾತು ಕೊಟ್ಟಿದ್ದೆ. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡು ಅಂದ್ರು, ಹಾಗಾಗಿ ಮುಖ್ಯಮಂತ್ರಿ ಹುದ್ದೆಯ ಪದತ್ಯಾಗ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೀರೂರು ಪಟ್ಟಣದಲ್ಲಿ ಶನಿವಾರ ಸಂಗೊಳ್ಳಿ ರಾಯಣ್ಣ ಮತ್ತು ದಾಸಶ್ರೇಷ್ಠ ಕನಕದಾಸರ ಪ್ರತಿಮೆಗಳ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ನೀವು ರಾಜೀನಾಮೆ ಕೇಳಿದರೆ ಕೊಡುತ್ತೇನೆ ಎಂದು ರಾಹುಲ್‌ ಗಾಂಧಿಗೆ ಮಾತು ಕೊಟ್ಟಿದ್ದೆ. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡು ಅಂದ್ರು. ಹಾಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ.

ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಅಂದ್ರು

ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಅಂದ್ರು, ಇಲ್ಲ ರಾಹುಲ್‌ಗೆ ಮಾತು ಕೊಟ್ಟಿದ್ದೇನೆ ಕೊಡಬೇಕು ಅಂತ ಕೊಟ್ಟೆ. ರಾಹುಲ್‌ ಅವರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡು ರಾಜೀನಾಮೆ ನೀಡಿದ್ದೇನೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರವಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ. 17 ಬಜೆಟ್ ಮಂಡಿಸಿದ್ದೇನೆ. ರಾಜ್ಯದಲ್ಲಿ ಇಷ್ಟು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬೇರೆ ಯಾರೂ ಇಲ್ಲ. ದೇವರಾಜ ಅರಸು ಅವರಿಗಿಂತ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದೇನೆ ಎಂದರು.

ನನಗೀಗ 79 ವರ್ಷ

ನನಗೀಗ 79 ವರ್ಷ ತುಂಬಿದ್ದು, ಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ಸಕ್ರಿಯವಾಗಿ ರಾಜಕಾರಣದಲ್ಲಿ ಇರುತ್ತೇನೆ. ಶಾಸಕ ಸ್ಥಾನದ ಅವಧಿ ಇನ್ನೆರಡು ವರ್ಷವಿದ್ದು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಜನರ ಕುಂದುಕೊರತೆ ಆಲಿಸಲು ಪ್ರಜಾಸೇವೆ ಇಲಾಖೆಗೆ ಚಾಲನೆ
ನಾನು ‘ನಾಡ ದೊರೆ’ ಅಲ್ಲ, ‘ಪ್ರಜಾಸೇವಕ’: ಸಿಎಂ ಡಿಕೆಶಿ