ಹೈಕಮಾಂಡ್‌ ಹೇಳಿದರೆ ಸಿಎಂ ಕುರ್ಚಿ ಬಿಡುವೆ: ಸಿದ್ದು

Published : Apr 13, 2024, 09:14 AM IST
Siddaramaiah

ಸಾರಾಂಶ

ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು : ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ಮೈಸೂರಿನಲ್ಲಿ ಪಿಟಿಐ ವಿಡಿಯೋಸ್‌ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆದ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಬಿಟ್ಟುಕೊಡಬೇಕಾಗುತ್ತದೆ’ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದರು.

‘ಅದು (ಸಿಎಂ ಆಗಿ ಮುಂದುವರಿಯುವುದು) ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಹೈಕಮಾಂಡ್ ತೀರ್ಮಾನಿಸಿದರೆ ಮುಂದುವರಿಯುತ್ತೇನೆ. ಇಲ್ಲದಿದ್ದರೆ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿದರು. ಈ ಮೂಲಕ ಹೈಕಮಾಂಡ್‌ ಹೇಳಿದರೆ ಸಿಎಂ ಗಾದಿ ಬಿಟ್ಟುಕೊಡುವ ಸುಳಿವು ನೀಡಿದರು.

ಅತಂತ್ರ ಲೋಕಸಭೆ?

ಇನ್ನು ಲೋಕಸಭೆ ಚುನಾವಣೆ ಬಗ್ಗೆ ಉತ್ತರಿಸಿದ ಅವರು, ‘ಚುನಾವಣೆಯಲ್ಲಿ ಇಂಡಿಯಾ ಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು. ಆದರೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್‌ಡಿಎಗೂ ಸಾಕಷ್ಟು ಸ್ಥಾನಗಳು ಸಿಗುವುದಿಲ್ಲ’ ಎಂದರು. ಈ ಮೂಲಕ ಅತಂತ್ರ ಲೋಕಸಭೆಯ ಸುಳಿವು ನೀಡಿದರು.

ಇನ್ನು ಕರ್ನಾಟಕದಲ್ಲಿನ ಕಾಂಗ್ರೆಸ್‌ನ ಲೋಕಸಭಾ ಚುನಾವಣಾ ಭವಿಷ್ಯದ ಬಗ್ಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ತಮ್ಮ ಪಕ್ಷ 15-20 ಸ್ಥಾನಗಳನ್ನು ಗೆಲ್ಲುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ, ‘4 ವರ್ಷಗಳ ನಂತರ ನಾನು ಚುನಾವಣಾ ರಾಜಕೀಯದಲ್ಲಿ ಉಳಿಯುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಉಳಿಯುತ್ತೇನೆ’ ಎಂದು ಪುನರುಚ್ಚರಿಸಿದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ