ಭಾರತ ಹಿಂದು ರಾಷ್ಟ್ರವಾದರೆ ದೇಶಕ್ಕೆ ಅಪಾಯಕಾರಿ: ಮಾಜಿ ಶಾಸಕ ಡಾ.ಯತೀಂದ್ರ ಸಮರ್ಥನೆ

KannadaprabhaNewsNetwork |  
Published : Jan 06, 2024, 02:00 AM IST
30 | Kannada Prabha

ಸಾರಾಂಶ

ಧರ್ಮದ ಕೆಲಸ ಸರ್ಕಾರ ಮಾಡುವುದಲ್ಲ. ಧರ್ಮದ ವಿಚಾರದಲ್ಲಿ ಕೆಲಸ ಮಾಡುವುದಕ್ಕೆ ಬೇರೆ ವ್ಯವಸ್ಥೆಗಳಿವೆ. ಇದು ಸರ್ಕಾರದ ಕೆಲಸವಾಗಬಾರದು. ಬಿಜೆಪಿ ಅಭಿವೃದ್ಧಿಯನ್ನೇ ಮಾಡದೆ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಏನನ್ನು ಅಭಿವೃದ್ಧಿ ಮಾಡದ ಬಿಜೆಪಿ ಧರ್ಮವ ವಿಚಾರವನ್ನ ಮುನ್ನಡೆಗೆ ಬಿಟ್ಟು ವಿಚಾರಗಳನ್ನ ಬಿಜೆಪಿ ಮರೆ ಮಾಚುತ್ತಿದೆ.

ಕನ್ನಡಪ್ರಭ ವಾರ್ತೆ ಮೈಸೂರುಭಾರತ ಹಿಂದು ರಾಷ್ಟ್ರವಾದರೆ ದೇಶಕ್ಕೆ ಅಪಾಯಕಾರಿ ಎಂಬ ತಮ್ಮ ಹೇಳಿಕೆಯನ್ನು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮತ್ತೆ ಸಮರ್ಥಿಸಿಕೊಂಡರು.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಅವರ ತತ್ವಗಳನ್ನ ಒಪ್ಪುವವರು ಯಾರು ನನ್ನ ಹೇಳಿಕೆಯನ್ನ ತಪ್ಪು ಎಂದು ಹೇಳುವುದಿಲ್ಲ. ಅಂಬೇಡ್ಕರ್ ಅವರು ಹೇಳಿರುವುದನ್ನೇ ನಾನು ಪುನರ್ ಉಚ್ಚರಿಸಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಈ ದೇಶ ಜ್ಯಾತ್ಯಾತೀತವಾಗಿರಬೇಕು. ಯಾವುದೇ ಒಂದು ಧರ್ಮದ ವಿಚಾರವಾಗಿ ದೇಶ ಇರಬಾರದು. ಅದು ಯಾವತ್ತಿದ್ದರು ಅಪಾಯಕಾರಿ. ಧರ್ಮದ ಹೆಸರಿನಲ್ಲಿರುವ ಪಾಕಿಸ್ತಾನ ಮತ್ತು ಕೆಲವು ದೇಶಗಳ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಕಾರಣ ನಾನು ಹಿಂದು ರಾಷ್ಟ್ರವಾಗುವುದು ಅಪಾಯಕಾರಿ ಎಂದು ಹೇಳಿದ್ದೇನೆ. ನನ್ನ ಮಾತಿಗೆ ಈಗಲೂ ಬದ್ಧ. ನಾನು ಹೇಳಿರುವುದರಲ್ಲಿ ಯಾವುದು ತಪ್ಪು ಇಲ್ಲ ಎಂದರು.ಬಿಜೆಪಿ ಧರ್ಮದ ಹೆಸರಿನಲ್ಲಿ ರಾಜಕಾರಣ:

ಧರ್ಮದ ಕೆಲಸ ಸರ್ಕಾರ ಮಾಡುವುದಲ್ಲ. ಧರ್ಮದ ವಿಚಾರದಲ್ಲಿ ಕೆಲಸ ಮಾಡುವುದಕ್ಕೆ ಬೇರೆ ವ್ಯವಸ್ಥೆಗಳಿವೆ. ಇದು ಸರ್ಕಾರದ ಕೆಲಸವಾಗಬಾರದು. ಬಿಜೆಪಿ ಅಭಿವೃದ್ಧಿಯನ್ನೇ ಮಾಡದೆ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಏನನ್ನು ಅಭಿವೃದ್ಧಿ ಮಾಡದ ಬಿಜೆಪಿ ಧರ್ಮವ ವಿಚಾರವನ್ನ ಮುನ್ನಡೆಗೆ ಬಿಟ್ಟು ವಿಚಾರಗಳನ್ನ ಬಿಜೆಪಿ ಮರೆ ಮಾಚುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.ಪ್ರತಾಪ್ ಸಿಂಹ ತಮ್ಮನ್ನ ತಾವು ನ್ಯಾಷನಲ್ ಲೀಡರ್ ಎಂದುಕೊಂಡಿದ್ದಾರೆ:ಪ್ರತಾಪ್ ಸಿಂಹ ತಮ್ಮನ್ನ ತಾವು ನ್ಯಾಷನಲ್ ಲೀಡರ್ ಎಂದುಕೊಂಡಿದ್ದಾರೆ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಟಾಂಗ್ ನೀಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಾಪ ಸಿಂಹ ಟಾರ್ಗೆಟ್ ಮಾಡಲು ಅವರೇನು ನ್ಯಾಷನಲ್ ಲೀಡರಾ? ತಾವು ನ್ಯಾಷನಲ್ ಲೀಡರ್ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯನವರ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ ಅಷ್ಟೆ ಎಂದು ಕುಟುಕಿದರು.ನಮ್ಮ ತಂದೆ ಯಾವತ್ತು ಟಾರ್ಗೆಟ್ ರಾಜಕಾರಣ ಮಾಡಿಲ್ಲ. ತಮಗೆ ರಾಜಕೀಯವಾಗಿ ಅನೇಕ ಬಾರಿ ಅನ್ಯಾಯವಾಗಿದ್ದರು ಕೂಡ ಅನ್ಯಾಯ ಮಾಡಿದ್ದವರ ವಿರುದ್ಧ ಅವರು ರಾಜಕಾರಣ ಮಾಡಲಿಲ್ಲ. ಇಂಥದರಲ್ಲಿ ಪ್ರತಾಪ್ ಸಿಂಹನನ್ನ ಯಾಕೆ ತಂದೆಯವರು ಟಾರ್ಗೆಟ್ ಮಾಡುತ್ತಾರೆ ಎಂದು ಪ್ರಶ್ನಿಸಿದರು.ಪ್ರತಾಪ್ ಸಿಂಹ ಅವರ ತಮ್ಮ ತಪ್ಪು ಮಾಡಿದ್ದಾರೆ ಅದಕ್ಕಾಗಿ ಕೇಸ್ ಆಗಿದೆ ಅಷ್ಟೇ. ಇದರಲ್ಲಿ ಟಾರ್ಗೆಟ್ ಎಲ್ಲಿಂದ ಬಂತು?ತಮ್ಮನ ತಪ್ಪು ಮುಚ್ಚಿಕೊಳ್ಳಲು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇಲ್ಲಿ ನನ್ನ ರಾಜಕೀಯ ಭದ್ರತೆಯೆ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.ನಾನಂತೂ ಟಿಕೆಟ್ ಕೇಳಿಲ್ಲ:

ಮೈಸೂರು ಲೋಕಸಭಾ ಚುನಾವಣೆಗೆ ನಾನಂತೂ ಟಿಕೆಟ್ ಕೇಳಿಲ್ಲ. ಪಕ್ಷ ನಾನೇ ಸ್ಪರ್ಧಿಸಬೇಕು ಎಂದರೆ ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಾನು ಇವತ್ತಿನವರೆಗೂ ಆ ವಿಚಾರದಲ್ಲಿ ಯಾವ ಯೋಚನೆ ಮಾಡಿಲ್ಲ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಅವರನ್ನ ಗೆಲ್ಲಿಸುವುದು ನಮ್ಮ ಜವಾಬ್ದಾರಿ. ಈ ದೃಷ್ಟಿಯಿಂದ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ