''ಬೇರೆ ನೌಕರಿಯಲ್ಲಿದ್ದರೆ ವಕೀಲಿಕೆ ಸನ್ನದು ಅಮಾನತು ಮಾಡಿಕೊಳ್ಳಿ''

Published : Jun 12, 2025, 06:52 AM IST
Lawyer sends contempt of court notice to CM Mamata Banerjee for those  comment on ssc case

ಸಾರಾಂಶ

ಕಾನೂನು ಪದವಿ ಪಡೆದು, ವಕೀಲಿಕೆ ನಡೆಸಲು ಸನ್ನದು ನೋಂದಾಯಿಸಿಕೊಂಡ ನಂತರ ಸರ್ಕಾರಿ, ಅರೆ ಸರ್ಕಾರಿ, ನ್ಯಾಯಾಂಗ ಇಲಾಖೆ ಮತ್ತು ಖಾಸಗಿ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿರುವವರು ತಮ್ಮ ಸನ್ನದು ಅಮಾನತು ಮಾಡಿಕೊಳ್ಳಲು ಕಾಲಾವಕಾಶ ವಿಸ್ತರಿಸಿದೆ.‌

 ಬೆಂಗಳೂರು : ರಾಜ್ಯದಲ್ಲಿ ಕಾನೂನು ಪದವಿ ಪಡೆದು, ವಕೀಲಿಕೆ ನಡೆಸಲು ಸನ್ನದು ನೋಂದಾಯಿಸಿಕೊಂಡ ನಂತರ ಸರ್ಕಾರಿ, ಅರೆ ಸರ್ಕಾರಿ, ನ್ಯಾಯಾಂಗ ಇಲಾಖೆ ಮತ್ತು ಖಾಸಗಿ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿರುವವರು ತಮ್ಮ ಸನ್ನದು ಅಮಾನತು ಮಾಡಿಕೊಳ್ಳಲು ಕರ್ನಾಟಕ ವಕೀಲರ ಪರಿಷತ್ತು ಜೂನ್ 29 ರವರೆಗೆ ಕಾಲಾವಕಾಶ ವಿಸ್ತರಿಸಿದೆ.‌

ರಾಜ್ಯದಲ್ಲಿ ಹಲವು ವಕೀಲರು ಪರಿಷತ್‌ನಲ್ಲಿ ಸನ್ನದು ಮಾಡಿಕೊಂಡ ನಂತರ ಸರ್ಕಾರಿ, ಅರೆ ಸರ್ಕಾರಿ, ಸಹಾಯಕ ಅಭಿಯೋಜಕರಾಗಿ, ನ್ಯಾಯಾಂಗ ಇಲಾಖೆ ಮತ್ತು ಖಾಸಗಿ ಕಂಪನಿಯ ನೌಕರರಾಗಿ ನೇಮಕಗೊಂಡಿರುತ್ತಾರೆ. ಅಲ್ಲದೇ ಬೇರೆ ಬೇರೆ ರೀತಿಯ ಲಾಭದಾಯಕ ವ್ಯಾಪಾರ, ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅಂತಹವರು ಸನ್ನದು ಅಮಾನತು ಮಾಡಿಕೊಳ್ಳಲು ಮೇ 31ರವರೆಗೆ ಕಾಲಾವಕಾಶ ನೀಡಲಾಗಿತ್ತು.

ಮೇ ಅಂತ್ಯದವರೆಗೆ ಅನೇಕ ಜನರು ತಮ್ಮ ಸನ್ನದು ಅಮಾನತು ಮಾಡಿಕೊಂಡಿದ್ದಾರೆ. ಆದರೆ, ಇನ್ನೂ ಅನೇಕರು ಸನ್ನದು ಅಮಾನತು ಮಾಡಿಕೊಳ್ಳಬೇಕಿದೆ. ವಕೀಲರ ಕಾಯ್ದೆ-1961ರ ಪ್ರಕಾರ ವಕೀಲಿಕೆ ತೊರೆದು ಅನ್ಯ ಉದ್ಯೋಗದಲ್ಲಿ ತೊಡಗಿಸಿಕೊಂಡವರು ಆರು ತಿಂಗಳಲ್ಲಿ ತಮ್ಮ ಸನ್ನದು ಅನ್ನು ಅಮಾನತು ಮಾಡಿಕೊಳ್ಳಬೇಕಿದೆ. ಆದ್ದರಿಂದ ಜೂ.29ರವರೆಗೆ ಕಾಲಾವಕಾಶ ನೀಡಲಾಗಿದೆ.

ಜೂ.14, 15, 21, 22, 28 ಮತ್ತು 29ರಂದು ಪರಿಷತ್‌ ಕಚೇರಿಗೆ ಭೇಟಿ ನೀಡಿ, ಏಕೆ ಈವರೆಗೂ ಸನ್ನದು ಅಮಾನತು ಮಾಡಿಕೊಂಡಿಲ್ಲ ಎಂಬುದಕ್ಕೆ ಕಾರಣ ವಿವರಿಸಿ ಪ್ರಮಾಣ ಪತ್ರದೊಂದಿಗೆ ಸನ್ನದು ಅಮಾನತಿಗೆ ಅರ್ಜಿ ಸಲ್ಲಿಸಬಹುದು. ಜೂ. 29ರೊಳಗೆ ಸನ್ನದು ಅಮಾನತು ಮಾಡಿಕೊಳ್ಳಲು ವಿಫಲವಾದರೆ, ಅಂತಹವರ ವಿರುದ್ಧ ಕಠಿಣ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ಪರಿಷತ್‌ ಅಧ್ಯಕ್ಷ ಎಸ್‌.ಎಸ್‌. ಮಿಟ್ಟಲಕೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಸರ್ವಜನಾಂಗ ಶಾಂತಿಯ ತೋಟ ಆಗಲು ಈ ಮಸೂದೆ ಬೇಕೇಬೇಕು