ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೇರಿದ್ದರೂ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ವಿರುದ್ಧ ಮಾಡಿರುವ ಟೀಕಾಪ್ರಹಾರಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಲಕ್ಷ್ಯ ತೋರಿದ್ದಾರೆ.
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೇರಿದ್ದರೂ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ವಿರುದ್ಧ ಮಾಡಿರುವ ಟೀಕಾಪ್ರಹಾರಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಲಕ್ಷ್ಯ ತೋರಿದ್ದಾರೆ.
ಶನಿವಾರ ಮಾತನಾಡಿದ ಅವರು, ‘ಪಕ್ಷದ ಕೆಲ ಹಿರಿಯ ಮುಖಂಡರು ಅಲ್ಲೊಂದು, ಇಲ್ಲೊಂದು ಹೇಳಿಕೆ ಕೊಡುತ್ತಿದ್ದಾರೆ. ಇದನ್ನು ನಾನು ಇಲ್ಲ ಅಂತ ಹೇಳುವುದಿಲ್ಲ’ ಎಂದಷ್ಟೇ ಹೇಳಿದ್ದಾರೆ.
ಬಿಜೆಪಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣ ಮತ್ತು ವಿಜಯೇಂದ್ರ ಬಣ ನಡುವೆ ತಿಕ್ಕಾಟ ನಡೆಯುತ್ತಿದೆ. ಇದರ ಮಧ್ಯೆ ಶಾಸಕ ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ವಿಜಯೇಂದ್ರ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ. ಆದರೆ ಇದಕ್ಕೆ ವಿಜಯೇಂದ್ರ ಉತ್ತರಿಸಲು ಹೋಗಿಲ್ಲ.
ಆರೋಪಕ್ಕೆ ಪ್ರತ್ಯುತ್ತರ ನೀಡಿದರೆ ಮತ್ತೆ ವಾಗ್ಯುದ್ಧ ಮುಂದುವರಿಯಲಿದೆ. ಇದು ಅನವಶ್ಯಕ ಸಮಸ್ಯೆಗೆ ಕಾರಣವಾಗಲಿದೆ. ಅಲ್ಲದೆ, ಪಕ್ಷದಲ್ಲಿ ಬೇರೆಯ ಸಂದೇಶ ರವಾನೆಯಾದಂತಾಗಲಿದೆ. ಪಕ್ಷದ ಕಾರ್ಯಕರ್ತರಲ್ಲೂ ಒಗ್ಗಟ್ಟು ಪ್ರದರ್ಶನಕ್ಕೆ ಪೆಟ್ಟು ಬೀಳಲಿದೆ ಎಂಬ ಕಾರಣಕ್ಕಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಲಾಗಿದೆ.