2028ಕ್ಕೆ ಪುಟ್ಬಾಲ್‌ ಅಲ್ಲ, ಚೆಸ್‌ ಆಡುತ್ತೇನೆ : ಡಿಕೆಶಿ

Published : Aug 15, 2026, 06:33 AM IST
DK Shivakumara

ಸಾರಾಂಶ

2028ರ ಚುನಾವಣೆ ಹೇಗೆ ಎದುರಿಸಬೇಕೆಂದು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.ಶುಕ್ರವಾರ ಸದನಕ್ಕೆ ಸಂಪುಟದ ಸಚಿವರನ್ನು ಪರಿಚಯಿಸುವ ವೇಳೆ ಮಾತನಾಡಿದರು

ವಿಧಾನಸಭೆ : 2028ರ ಚುನಾವಣೆ ಹೇಗೆ ಎದುರಿಸಬೇಕೆಂದು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸಂಪುಟದ ಸಚಿವರನ್ನು ಪರಿಚಯಿಸುವ ವೇಳೆ ಮಾತನಾಡಿದರು

ಶುಕ್ರವಾರ ಸದನಕ್ಕೆ ಸಂಪುಟದ ಸಚಿವರನ್ನು ಪರಿಚಯಿಸುವ ವೇಳೆ ಮಾತನಾಡಿದ ಅವರು, ಅಧಿಕಾರದ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಅವರು ಇದೇ ಸದನದಲ್ಲಿ ಮಾತನಾಡಿದಾಗ ನಾನು ಒಂದು ಮಾತು ಹೇಳಿದ್ದೆ. ಒಬ್ಬ ಧೈರ್ಯಶಾಲಿ ವ್ಯಕ್ತಿಯಿಂದ ಬಹುಮತ ಸಾಧ್ಯವಾಗುತ್ತದೆ. ಸಿದ್ದರಾಮಯ್ಯ ಅವರು ಸೇರಿ ನಾವು 136 ಜನ ಒಂದೇ ಎಂದು ಅಂತ ಹೇಳಿದ್ದೆ. ನಾನು ಅದನ್ನು ಸಾಬೀತುಪಡಿಸಿದ್ದೇನೆ. ನಾವು ಒಟ್ಟಾಗಿ ಹೋರಾಟ ಮಾಡುತ್ತೇವೆ. ಅಂತಿಮ ಫಲಿತಾಂಶವನ್ನು ಜನ ತೀರ್ಮಾನಿಸುತ್ತಾರೆ ಎಂದು ಹೇಳಿದರು.

2028ರ ಚುನಾವಣೆ ಹೇಗೆ ಎದುರಿಸಬೇಕು ಎಂದು ನನಗೆ ಗೊತ್ತಿದೆ

2028ರ ಚುನಾವಣೆ ಹೇಗೆ ಎದುರಿಸಬೇಕು ಎಂದು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು. ಜನರ ಸೇವೆ ಮಾಡುವಾಗ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಇಲ್ಲಿ ಯಾರೂ ಶಾಶ್ವತವಲ್ಲ. ನಾವು ವಿರೋಧ ಪಕ್ಷಕ್ಕೆ ಹೋಗಬಹುದು, ವಿರೋಧ ಪಕ್ಷದವರು ಇಲ್ಲಿಗೆ ಬರಬಹುದು. ಜನರು ರಾಜ್ಯದ ಹಿತ ಕಾಪಾಡಲು ನಮ್ಮೆಲ್ಲರನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಗುಟ್ಕಾ ನಿಷೇಧದಿಂದ ಅಡಕೆ ಬೆಳೆಗಾರರು ತಲ್ಲಣ
ಗುಟ್ಕಾ, ಪಾನ್‌ ಮಸಾಲಾ ನಿಷೇಧ ಆದೇಶ ವಾಪಸಿಲ್ಲ: ಸಚಿವ ಖಾದರ್‌ ಸ್ಪಷ್ಟೋಕ್ತಿ