ಕನ್ನಡಪ್ರಭ ವಾರ್ತೆ ಬೆಳಗಾವಿ
ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ಕಟ್ಟಿಹಾಕುವುದು ರಾಜಕೀಯ ದ್ವೇಷವಾಗಿದೆ. ಇಂಥ ಬೆದರಿಕೆಗಳಿಗೆ ಪ್ರತಿಪಕ್ಷಗಳು ಹೆದರಲ್ಲ ಎಂದು ಸರ್ಕಾರಕ್ಕೆ ತಿರುಗೇಟು ನೀಡಿದರು.
ರಾಜ್ಯದಲ್ಲಿ ಈ ಹಿಂದೆ ಎಂದೂ ದ್ವೇಷದ ರಾಜಕಾರಣ ಇರಲಿಲ್ಲ. ರಾಜ್ಯದಲ್ಲಿ ಆರೋಗ್ಯಕರ ರಾಜಕೀಯ ವಾತಾವರಣ ಇತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನತಾ ಪರಿವಾರದಿಂದ ಬಂದವರು. ಈ ರೀತಿಯಲ್ಲಿ ದ್ವೇಷದ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದೆ ಎಂದರು.ಸಿಎಂ ಸಿದ್ದರಾಮಯ್ಯನವರದ್ದು ಪ್ರತಿಪಕ್ಷಗಳನ್ನು ಬೆದರಿಸುವ ತಂತ್ರವಷ್ಟೆ. ಎಚ್.ಡಿ. ಕುಮಾರಸ್ವಾಮಿ ಅವರೂ ಬಹಳಷ್ಟು ಗಟ್ಟಿಯಾಗಿದ್ದು, ಎಲ್ಲವನ್ನೂ ಎದುರಿಸುತ್ತಾರೆ. ಎಚ್.ಡಿ.ಕುಮಾರಸ್ವಾಮಿ ಈ ಹಿಂದೆ ಎರಡು ಸಲ ಮುಖ್ಯಮಂತ್ರಿ ಆದ ಅನುಭವ ಹೊಂದಿದ್ದಾರೆ. ಸರ್ಕಾರದ ದ್ವೇಷ ರಾಜಕಾರಣದ ವಿರುದ್ಧ ಚಳಿಗಾಲದ ಅಧಿವೇಶನದಲ್ಲಿ ಹೋರಾಡುತ್ತೇವೆ. ದ್ವೇಷ ರಾಜಕಾರಣದ ಬಿಸಿಯನ್ನು ಬೆಳಗಾವಿಯಲ್ಲಿ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.