ಬಂಗಾರಪೇಟೆ ಹಾಗೂ ಕೆಜಿಎಫ್ ಕ್ಷೇತ್ರದಲ್ಲಿ ಪ್ರತಿನಿತ್ಯ30 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರು ಉದ್ಯೋಗ ಅರಸಿ ಬೆಂಗಳೂರಿಗೆ ಹೋಗಿಬರುತ್ತಾರೆ. ಅದನ್ನು ತಪ್ಪಿಸಲು ಬಿಜಿಎಲ್ ಪ್ರದೇಶದಲ್ಲಿ ಉತ್ದಾದನಾ ಘಟಕ ಸ್ಥಾಪನೆಯಾಗಬೇಕು,
ಕೋಲಾರ : ನೀರಾವರಿ ಯೋಜನೆ, ಯುವಕವರಿಗೆ ಉದ್ಯೋಗ ಸೃಷ್ಟಿಗೆ ಮೊದಲ ಆದ್ಯತೆ ನೀಡುವುದಾಗಿ ನೂತನ ಸಂಸದ ಮಲ್ಲೇಶ್ ಬಾಬು ಹೇಳಿದರು. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರ ಜನತೆ ನೀಡಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ,5 ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.
ಎಚ್ಡಿಕೆಗೆ ಸಚಿವ ಸ್ಥಾನ ನೀಡಲಿ
ಎಚ್.ಡಿ.ಕುಮಾರಸ್ವಾಮಿ ಯವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿದರೆ ಸೂಕ್ತ. ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಸಾಕಷ್ಟು ಅನುಭವ ಹೊಂದಿದ್ದಾರೆ. ಅವರಿಗೆ ಯಾವ ಖಾತೆ ನೀಡುತ್ತಾರೆ ಎನ್ನುವುದು ಬಿಜೆಪಿ ಹೈಕಮಾಂಡ್ ಹಾಗೂ ಕುಮಾರಸ್ವಾಮಿರಿಗೆ ಬಿಟ್ಟ ವಿಚಾರ. ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸೂಕ್ತ ಸಚಿವ ಸ್ಥಾನ ನೀಡಿದರೆ ಉತ್ತಮ ಎಂದು ತಿಳಿಸಿದರು.
ಕಳೆದ 5 ವರ್ಷಗಳಲ್ಲಿ ಬಿಜೆಪಿ ಸಂಸದರಾಗಿದ್ದ ಎಸ್ ಮುನಿಸ್ವಾಮಿ ಕ್ಷೇತ್ರಕ್ಕೆ ಬೇಕಾದ ಅಭಿವೃದ್ದಿಗಳ ಪಟ್ಟಿ ಕೊಟ್ಟಿದ್ದಾರೆ. ಈಗಾಗಲೇ ಅವರು ಕೈಗೆತ್ತಿಗೊಂಡಿರುವ ಅಭಿವೃದ್ದಿ ಯೋಜನೆಗಳನ್ನು ಪೂರೈಸಲು ಪ್ರಾಮಾಣಿ ಪ್ರಯತ್ನ ಮಾಡುತ್ತೇನೆ, ನೀರಾವರಿ ಯೋಜನೆ ಹಾಗೂ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎನ್ನುವುದು ನನ್ನ ಮೊದಲ ಆಧ್ಯತೆ ಎಂದು ವಿವರಿಸಿದರು. ಬಿಜಿಎಲ್ ಪ್ರದೇಶದಲ್ಲಿ ಕೈಗಾರಿಕೆ
ಬಂಗಾರಪೇಟೆ ಹಾಗೂ ಕೆಜಿಎಫ್ ಕ್ಷೇತ್ರದಲ್ಲಿ ಪ್ರತಿನಿತ್ಯ 30 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರು ಉದ್ಯೋಗ ಅರಸಿ ಬೆಂಗಳೂರಿಗೆ ಹೋಗಿಬರುತ್ತಾರೆ. ಅದನ್ನು ತಪ್ಪಿಸಲು ಬಿಜಿಎಲ್ ಪ್ರದೇಶದಲ್ಲಿ ಉತ್ದಾದನಾ ಘಟಕ ಸ್ಥಾಪನೆಯಾಗಬೇಕು, ಕೋಲಾರ ಗಡಿಯಾದ ವಿ.ಕೋಟ ಫಲಮನೇರು ಭಾಗದಲ್ಲಿ ಹರಿಯುತ್ತಿರುವ ಕೃಷ್ಟ ನದಿ ನೀರನ್ನು ಕೋಲಾರಕ್ಕೆ ತರುವ ಬಗ್ಗೆ ಎನ್.ಡಿ.ಎ ಮೈತ್ರಿಯಲ್ಲಿ ಭಾಗವಾಗಿರುವ ಟಿಡಿಪಿ ಅವರ ಜೊತೆ ಮಾತನಾಡಲು ಒಳ್ಳೆಯ ಅವಕಾಶ ಲಭಿಸಿದೆ.
ಆಂಧ್ರದ ಟಿಡಿಪಿ ಅಧಿಕಾರ ಸ್ವೀಕರಿಸಿದ ಬಳಿಕ ಕೃಷ್ಣಾ ನದಿ ನೀರನ್ನು ಕೋಲಾರಕ್ಕೆ ತರುವ ನಿಟ್ಟಿನಲ್ಲಿ ಪ್ರಧಾನಿಗಳ ಮೇಲೆ ಒತ್ತಡ ಹಾಕಿ ಈ ಯೋಜನೆ ಜಾರಿಗೆ ತರಲು ರೂಪುರೇಷೆ ಮಾಡಲಾಗುವುದು ಎಂದರು. ತಮಗೆ ಕೆಜಿಎಫ್ ಕ್ಷೇತ್ರದಲ್ಲಿ ೩೦ ಸಾವಿರ ಮತಗಳ ಹಿನ್ನಡೆಯಾಗಿದೆ, ಬಂಗಾರಪೇಟೆ ಕ್ಷೇತ್ರದಲ್ಲಿ ಇಪ್ಪತ್ತೆಂಟು ಸಾವಿರ ಮತಗಳನ್ನು ಮುನ್ನಡೆ ನೀಡಿದ್ದಾರೆ. ಅವರಿಗೆ ನಾನು ಚಿರಋಣಿಯಾಗಿರುತ್ತೇನೆ, ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುತ್ತಾರೆ ಎನ್ನುವ ನಂಬಿಕೆ ಇತ್ತು. ಅದರ ಫಲಿತಾಂಶವೇ ತಮಗೆ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದರು.