ನನ್ನ ಬದಲಾವಣೆ ಮಾಡೋದು ಭ್ರಮೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಚಾಟಿ

Published : Dec 01, 2024, 11:05 AM IST
BY vijayendraa

ಸಾರಾಂಶ

‘ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿ ಇರುವವರಿಗೆ ಒಳ್ಳೆಯ ಸುದ್ದಿ ಬರಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರು : ‘ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿ ಇರುವವರಿಗೆ ಒಳ್ಳೆಯ ಸುದ್ದಿ ಬರಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾನು ಮಾಡುತ್ತಿರುವ ಪ್ರಯತ್ನದ ಬಗ್ಗೆ ಪಕ್ಷದ ವರಿಷ್ಠರಿಗೆ ಸಮಾಧಾನ ಇದೆ. ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತೇವೆ’ ಎಂದು ಹೇಳಿದರು.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರನ್ನು ಉಚ್ಚಾಟನೆ ಮಾಡುವಂತೆ ದೆಹಲಿಗೆ ತೆರಳಿ ದೂರು ಕೊಡುತ್ತಿಲ್ಲ. ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ದಿನನಿತ್ಯ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದು, ಮಾಧ್ಯಮಗಳಲ್ಲಿ ಬರುತ್ತಿದೆ. ಅವರದೇ ಆದ ರೀತಿಯಲ್ಲಿ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದರು.

ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಉಪ ಚುನಾವಣೆಗಳ ಫಲಿತಾಂಶ, ರಾಜ್ಯದಲ್ಲಾಗುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಗಮನಕ್ಕೆ ತಂದಿದ್ದೇನೆ. ಕೆಲವರ ನಡವಳಿಕೆಯಿಂದ ಅವರು ಎತ್ತರಕ್ಕೆ ಬೆಳೆಯುವ ಭ್ರಮೆಯಲ್ಲಿದ್ದರೆ, ಖಂಡಿತ ಅದು ಸಾಧ್ಯವಿಲ್ಲ. ಕಾರ್ಯಕರ್ತರು ಕೂಡ ಹಿಡಿಶಾಪ ಹಾಕುತ್ತಿದ್ದಾರೆ. ಇದೆಲ್ಲಕ್ಕೂ ಇತಿಶ್ರೀ ಹಾಡಬೇಕೆಂಬ ಅಪೇಕ್ಷೆ ಕಾರ್ಯಕರ್ತರಲ್ಲೂ ಇದೆ. ಯಾರ ಗಮನಕ್ಕೆ ತರಬೇಕೋ ಅದನ್ನು ತಂದಿದ್ದೇನೆ ಎಂದು ತಿಳಿಸಿದರು.

PREV

Recommended Stories

ನನ್ನ ವಿರುದ್ಧ ಮೂವರ ಪಿತೂರಿ - ಬಿಜೆಪಿ ಸೇರೋ ಬಗ್ಗೆ ಏನಂದ್ರು ರಾಜಣ್ಣ
ಆ.17ರಿಂದ ಕಾಂಗ್ರೆಸ್‌ ‘ಮತದಾರ ಅಧಿಕಾರ ಯಾತ್ರೆ’