;Resize=(412,232))
ಬೆಂಗಳೂರು : ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಗೊಂದಲ ಹಿನ್ನೆಲೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ.
ಅಬ್ದುಲ್ ಜಬ್ಬಾರ್ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಶಿವಕುಮಾರ್ ಅವರು ಭಾನುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ‘ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ನೂತನ ಸಮಿತಿಯನ್ನು ಶೀಘ್ರ ರಚನೆ ಮಾಡಲು ಕ್ರಮ ವಹಿಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.